ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೌನ್ಯ ಅವರ ಪತಿ 41 ವರ್ಷದ ಪ್ರತಾಪ್ ಕುಮಾರ್ ನಿಧನರಾಗಿದ್ದಾರೆ. ವಿಷ ಸೇವಿಸಿದ್ದನ್ನು ಕಂಡವರು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಅಳಿಯ ಆತ್ಮಹತ್ಯೆ ಮಾಡಿಕೊಳ್ಳುವುದು ತಿಳಿಯುತ್ತಿದ್ದಂತೆ ಬಿ.ಸಿ.ಪಾಟೀಲ್ ಅವರು ಪೊಲೀಸರಿಗೆ ಕರೆ ಮಾಡಿದ್ದರಂತೆ.
ಅಳಿಯ ಆತ್ಮಹತ್ಯೆ ಮಾಡಿಕೊಳ್ಳುತ್ತೀನಿ ಎಂದಾಗಲೇ ಬಿ.ಸಿ ಪಾಟೀಲ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರ ಫೋನ್ ನಂಬರ್ ಹಾಗೂ ಕಾರಿನ ನಂಬರ್ ಅನ್ನು ನೀಡಿದ್ದಾರೆ. ನಮ್ಮ ಅಳಿಯ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಕೂಡಲೇ ಅವರನ್ನು ಪತ್ತೆ ಹಚ್ಚಿ ಎಂದು ಮನವಿ ಮಾಡಿದ್ದರಂತೆ. ಬಿ.ಸಿ.ಪಾಟೀಲ್ ಅವರ ಮನವಿಯಂತೆ ಕಾರಿನ ನಂಬರ್ ಹಾಗೂ ಮೊಬೈಲ್ ನಂಬರ್ ಟ್ರೇಸ್ ಮಾಡಿ ಪತ್ತೆ ಹಚ್ಚಿದ್ದಾರೆ.
ಹೊನ್ನಾಳಿಯ ಅರಣ್ಯ ಪ್ರದೇಶದಲ್ಲಿ ಕಾರು ನಿಲ್ಲಿಸಿ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು. ಪೊಲೀಸರು ಕೂಡ ಟ್ರೇಸ್ ಮಾಡಿದ್ದು, ಮಧ್ಯಾಹ್ನ 3 ಗಂಟೆಗೆ ಹೊನ್ನಾಳಿಯ ಅರಣ್ಯ ಪ್ರದೇಶದಲ್ಲಿ ಕಾರು ಪತ್ತೆಯಾಗಿದೆ. ಅಷ್ಟರಲ್ಲಿ ವಿಷ ಸೇವಿಸಿ ಕಾರಿನಲ್ಲಿಯೇ ನರಳಾಡುತ್ತಿದ್ದದ್ದು ಪೊಲೀಸರ ಕಣ್ಣಿಗೆ ಕಂಡಿದೆ. ತಕ್ಷಣ ಅವರನ್ನು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರಂತೆ. ಆದರೆ ಹೆಚ್ಚಿನ ಚಿಕಿತ್ಸೆ ಬೇಕೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಶಿವಮೊಗ್ಗದ ಆಸ್ಪತ್ರೆಗೆ ಬಿಸಿ ಪಾಟೀಲ್ ಕುಟುಂಬಸ್ಥರು ಭೇಟಿ ನೀಡಿದ್ದಾರೆ. ಇನ್ನು ಶಿವಮೊಗ್ಗದ ಸಂಸದ ಬಿವೈ ರಾಘವೇಂದ್ರ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










