Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೂರ್ಣಿಮಾ ಶ್ರೀನಿವಾಸ್ ದಂಪತಿಗಳಿಂದ ಮೇದಾರ ಕೇತೇಶ್ವರ ಮಠದಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.10 : ಬಡ ಮಕ್ಕಳ ಶಿಕ್ಷಣಕ್ಕೆ ಅವಶ್ಯವಿರುವ ವಸ್ತುಗಳನ್ನು ಹಿಂದಿನಿಂದಲೂ ನೀಡುತ್ತಾ ಬರುತ್ತಿರುವ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಪತಿ ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಇವರುಗಳ ಸೇವೆ ಶ್ಲಾಘನೀಯ ಎಂದು ಬಸವ ಮೇದಾರ ಕೇತೇಶ್ವರ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದರು.

ಸೀಬಾರದ ಸಮೀಪವಿರುವ ಮೇದಾರ ಕೇತೇಶ್ವರ ಮಠದಲ್ಲಿ 8, 9, 10 ನೇ ತರಗತಿಯ 150 ಬಡ ಮಕ್ಕಳಿಗೆ ಉಚಿತ ಸಮವಸ್ತ್ರಗಳ ವಿತರಣೆಯ ಸಾನಿಧ್ಯ ವಹಿಸಿ ಮಾತನಾಡಿದರು.

ಪೂರ್ಣಿಮಾ ಶ್ರೀನಿವಾಸ್‍ರವರು ಶಾಸಕರಾಗಿದ್ದಾಗಲೂ ನಮ್ಮ ಮಠದ ಬಡ ಮಕ್ಕಳ ಶಿಕ್ಷಣಕ್ಕೆ ಏನು ಕೇಳಿದರೂ ಇಲ್ಲವೆನ್ನಲಿಲ್ಲ. ನಮ್ಮ ಮಠದ ಜೊತೆ ಮೊದಲಿನಿಂದಲೂ ವಿನಾಬಾವ ಒಡನಾಟವಿದೆ. ಬಡ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಸೌಲತ್ತುಗಳನ್ನು ನೀಡುತ್ತಿದೆ. ಇದರ ಜೊತೆಗೆ ಇಂತಹ ದಾನಿಗಳು ಕೈಜೋಡಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಗುಣಗಾನ ಮಾಡಿದರು.

ಹಳ್ಳಿಗಾಡಿನಿಂದ ಬರುವ ಬಡ ಕುಟುಂಬದ ಮಕ್ಕಳು ಬಟ್ಟೆ ಕೊಂಡುಕೊಳ್ಳಲು ಆಗದಂತ ಕಡು ಕಷ್ಟದಲ್ಲಿರುತ್ತಾರೆ. ಇಂತಹ ಮಕ್ಕಳಿಗೆ ಪೂರ್ಣಿಮ ಶ್ರೀನಿವಾಸ್ ದಂಪತಿಗಳು ಸಮವಸ್ತ್ರಗಳನ್ನು ಉದಾರ ಮನಸ್ಸಿನಿಂದ ಕೊಡಿಸಿದ್ದಾರೆ. ಇದೇ ರೀತಿ ಇನ್ನು ಅನೇಕ ಪರೋಪಕಾರದ ಸೇವೆ ಮಾಡುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸ್ವಾಮೀಜಿ ಹಾರೈಸಿದರು.

ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡಿ ಮೇದಾರ ಎನ್ನುವ ಬುಡಕಟ್ಟು ಸಮುದಾಯ ಅತ್ಯಂತ ಕಡು ಬಡತನದಲ್ಲಿದ್ದು, ಶಿಕ್ಷಣದ ಮೂಲಕ ಬದುಕನ್ನು ಹಸನು ಮಾಡಿಕೊಳ್ಳಬೇಕು. ಮಠದ ಸುತ್ತಲು ಒಳ್ಳೆಯ ಪ್ರಶಾಂತ ವಾತಾವರಣವಿದ್ದು, ಮಕ್ಕಳು ಇದರ ಸದುಪಯೋಗಪಡಿಸಿಕೊಂಡು ಶಿಕ್ಷಣವಂತರಾಗುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.

ವಿದ್ಯಾರ್ಥಿ ಜೀವನ ಎನ್ನುವುದು ವೈಯಾರ ಪುಂಡಾಟಿಕೆ ಮಾಡುವುದಲ್ಲ. ಶ್ರದ್ದೆ ವಹಿಸಿ ಕಠಿಣ ಪರಿಶ್ರಮದಿಂದ ಶಿಕ್ಷಣ ಕಲಿತಾಗ ಜೀವನದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಲು ಸಾಧ್ಯ. ಬುದ್ದ, ಬಸವ, ಅಂಬೇಡ್ಕರ್‍ರವರ ಆಶಯದಂತೆ ನೀವುಗಳು ವಿದ್ಯಾವಂತರಾಗಬೇಕು ಎಂದರು.

ಕಣಿವೆ ಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಬೆಳಗಟ್ಟ, ಪೊಲೀಸ್ ವೃತ್ತ ನಿರೀಕ್ಷಕ ತಿಪ್ಪೇಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ವೇಮನರೆಡ್ಡಿ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment