ಚಿತ್ರದುರ್ಗ, (ನ.17) : ನಗರದ ಜೆಸಿಆರ್ ಬಡಾವಣೆ ನಿವಾಸಿ ಕವಿತಾ ಆರ್ ಶೆಟ್ಟಿ (46) ಅನಾರೋಗ್ಯದಿಂದ ಬುಧವಾರ ಬೆಳಿಗ್ಗೆ ನಿಧನರಾದರು.
ಪತಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಇಂದು (ಬುಧವಾರ) ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದರು.