Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಲ್ಮೀಕಿ ಅಭಿವೃದ್ಧಿ ಹಗರಣ : ಕನ್ನಡದ ಕೋಟ್ಯಾಧಿಪತಿಯಲ್ಲಿ 50 ಲಕ್ಷ ಗೆದ್ದಿದ್ದ ಪಂಪಣ್ಣ ಹೆಸರು..!

---Advertisement---

 

ರಾಯಚೂರು: ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆಯಿಂದ ಎಲ್ಲಾ ಕಡೆ ದಾಳಿ ನಡೆಸುತ್ತಿದ್ದಾರೆ. ಅದರಲ್ಲೂ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದವರ ಮನೆ, ಕಚೇರಿ ಮೇಲೂ ದಾಳಿ ನಡೆಸುತ್ತಿದ್ದಾರೆ. ನಿನ್ನೆಯೆಲ್ಲಾ ಬಿ.ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಅವರ ಮನೆ ಹಾಗೂ ಕಚೇರಿ ಮೇಲೂ ದಾಳಿ ನಡೆದಿತ್ತು. ಇಂದು ದದ್ದಲ್ ಅವರ ಮಾಜಿ ಪಿಎ ಪಂಪಣ್ಣ ರಾಥೋಡ್ ಮನೆ ಮೇಲು ದಾಳಿ ನಡೆದಿದೆ.

ದಾಳಿ ಬಳಿಕ ಪಂಪಣ್ಣ ವಿಚಾರವಾಗಿ ಸಾಕಷ್ಟು ವಿಚಾರಗಳು ಹೊರ ಬರುತ್ತಿವೆ. ಪಂಪಣ್ಣ ಈ ಮೊದಲು ಶಿಕ್ಷಕ ವೃತ್ತಿಯಲ್ಲಿದ್ದರು. ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಬಳಿಕ ಶಾಸಕ ಬಸನಗೌಡ ದದ್ದಲ್ ಅವರ ಜೊತೆಗೆ ಪಿಎ ಆಗಿ ಕೆಲಸ ಮಾಡುತ್ತಿದ್ದರು. ಈಗ ಅವರ ಜೊತೆಗೆ ಇಲ್ಲ. ಆದರೆ ಬೆಳಗ್ಗೆನೆ ಲೋಕಾಯುಕ್ತ ಅಧಿಕಾರಿಗಳು ಪಂಪಣ್ಣ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಲವು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

ಪಂಪಣ್ಣ ಅವರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾಗ ಅವರು ಕನ್ನಡದ ಕೋಟ್ಯಾಧಿಪತಿಯಲ್ಲಿ ಭಾಗವಹಿಸಿದ್ದರು ಎಂಬ ಸತ್ಯ ಹೊರ ಬಿದ್ದಿದೆ. ಶಿಕ್ಷಕ ವೃತ್ತಿಯಲ್ಲಿದ್ದಾಗಲೇ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅದರಲ್ಲಿ 50 ಲಕ್ಷ ಹಣವನ್ನು ಗೆದ್ದಿದ್ದರು. ಇದೀಗ ಬೆಳಗ್ಗೆಯಿಂದಾನು ಹಾಸನ, ಮಂಡ್ಯ, ಬೆಳಗಾವಿ, ಕಲಬುರಗಿಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ 50 ಲಕ್ಷ ಹಣ ಪಡೆದ ಆರೋಪ ಪಂಪಣ್ಣ ಮೇಲಿದೆ. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment