ಮಕ್ಕಳಲ್ಲೇ ಡೆಂಗ್ಯೂ ಹೆಚ್ಚಳ : ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ ಸರ್ಕಾರ

suddionenews
1 Min Read

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಅದರಲ್ಲೂ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದೆ. ಇದೀಗ ಎಲ್ಲಾ ಶಾಲೆಗಳಿಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಶಾಲಾ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಜಾಗಗಳಲ್ಲಿ ಮತ್ತು ಇಲ್ಲಿನ ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ಶೇಖರಣೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸತಕ್ಕದ್ದು. ಮತ್ತು ಇಂತಹ ಸನ್ನಿವೇಶಗಳ ಹತ್ತಿರ ಶಾಲಾ ವಿದ್ಯಾರ್ಥಿಗಳು ಸುತ್ತಾಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸತಕ್ಕದ್ದು ಹಾಗೂ ಇವುಗಳನ್ನು ತೆರವುಗೊಳಿಸಲು ಹಾಗೂ ವಿಲೇವಾರಿ ಮಾಡಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು.

2) ಇಂತಹ ಸಂದರ್ಭಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ, ಪುರ ಸಭೆ, ನಗರ ಸಭೆ, ಮಹಾನಗರ ಪಾಲಿಕೆಗಳ (ಸ್ಥಳೀಯ ಸಂಸ್ಥೆಗಳ) ಹಾಗೂ ಸ್ಥಳೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಸಹಕಾರದಿಂದ ಶಾಲಾ ಕಟ್ಟಡದಲ್ಲಿ ಅಥವಾ ಆವರಣದಲ್ಲಿ ಸಂಗ್ರಹವಾಗಿರುವ ನೀರನ್ನು ತೆರವುಗೊಳಿಸಬೇಕು. ಇಂತಹ ಸನ್ನಿವೇಶಗಳನ್ನು ತೆರವುಗೊಳಿಸಲು ಮತ್ತು ಶಾಲಾ ಪರಿಸರಕ್ಕೆ ಸಾಂಕ್ರಾಮಿಕ ರೋಗ ನಿರೋಧಕ ದ್ರಾವಣಗಳನ್ನು ಕಾಲ-ಕಾಲಕ್ಕೆ ಸಿಂಪಡಿಸಲು ನಿಯಮಾನುಸಾರ ಅಗತ್ಯ ಕ್ರಮವಹಿಸತಕ್ಕದ್ದು.

3) ಶಾಲೆಗಳಲ್ಲಿನ ನೀರಿನ ಸಂಗ್ರಹಕಗಳನ್ನು (ತೊಟ್ಟಿ, ಬ್ಯಾರೆಲ್ ಇತ್ಯಾದಿ)ಗಳನ್ನು ವಾರಕ್ಕೊಮ್ಮೆ ಉಜ್ಜಿ, ತೊಳೆದು, ಖಾಲಿ ಮಾಡಿ. ಒಣಗಿಸಿ ಭರ್ತಿ ಮಾಡಿದ ನಂತರ ಭದ್ರವಾದ ಮುಚ್ಚಳದಿಂದ ಮುಚ್ಚುವುದು.

4) ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಡೆಂಗ್ಯೂ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ಕುರಿತು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಹಾಗೂ ನಿಯಂತ್ರಣ ಕ್ರಮಗಳ ಕುರಿತು ಸ್ಥಳೀಯ ಆರೋಗ್ಯ ಸಿಬ್ಬಂದಿ / ಶಾಲಾ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ನೀಡುವುದು.

5) ಒಂದು ವೇಳೆ ಶಾಲಾ ವಿದ್ಯಾರ್ಥಿಗಳಲ್ಲಿ ಇಂತಹ ಜ್ವರ ಪ್ರಕರಣಗಳು ವರದಿಯಾದಲ್ಲಿ ತಕ್ಷಣ ಅಂತಹ ವಿದ್ಯಾರ್ಥಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಸೂಕ್ತ ಚಿಕಿತ್ಸೆಯನ್ನು ಕೊಡಿಸುವುದು. ಶುಶೂಷೆ ಮಾಡಿಸಲು ಅಗತ್ಯ ಕ್ರಮವಹಿಸುವುದು. ಒಂದು ವೇಳೆ ಶಾಲೆಗಳಲ್ಲಿ ಗುಂಪು ಜ್ವರ ಪ್ರಕರಣಗಳು ವರದಿಯಾದಲ್ಲಿ ಸ್ಥಳೀಯ, ತಾಲ್ಲೂಕು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತ್ವರಿತವಾಗಿ ಮಾಹಿತಿ ನೀಡಬೇಕು.

Share This Article
Leave a Comment

Leave a Reply

Your email address will not be published. Required fields are marked *