ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನ ಸುಸ್ತಾಗಿ ಹೋಗಿದ್ದಾರೆ. ಫಸಲಿಗೆ ಬಂದ ಬೆಳೆ ಹಾನಿಯಾಗುತ್ತಿದೆ ಎಂದು ರೈತ ತಲೆ ಮೇಲೆ ಕೈ ಹೊರುವಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಮತ್ತೆ ನಾಲ್ಕು ದಿನ ಮಳೆಯಾಗುತ್ತೆ ಎಂದರೆ ರೈತನ ಪಾಡು ಏನಾಗಬೇಡ…? ಆದ್ರೆ ಮತ್ತೆ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಹವಮಾನ ಇಲಾಖೆ.
ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೋಡಕವಿದ ವಾತಾವರಣ ಮುಂದುವರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಭಾರತೀಯ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆ ಮುನ್ಸೂಚನೆ ಇದೆ.
ರಾಜ್ಯದ ದಕ್ಷಿಣ ಒಳನಾಡು, ಪಶ್ಚಿಮ ಘಟ್ಟ, ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಬದಲಾಗಬಹುದು.