ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ಬೈಕ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ ಹಾಗೂ ಯೋಗೀಶ್ ಮೃತರು.
ಶನಿವಾರ ತಡರಾತ್ರಿ ಈ ಅಪಘಾತ ನಡೆದಿದೆ. ಮೃತರಿಬ್ಬರು ಹೊಸದುರ್ಗದಿಂದ ಸಿದ್ದಾಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿರುವಾಗ ಅಪಾಘಾತ ಸಂಭವಿಸಿದೆ. 26 ವರ್ಷದ ಪ್ರವೀಣ್ ಚಿಕ್ಕಮಗಳೂರು ಜಿಲ್ಲೆ ಸಿದ್ದಾಪುರ ಗ್ರಾಮದವರು ಹಾಗೂ 27 ವರ್ಷದ ಯೋಗೀಶ್ ಹೊಸದುರ್ಗ ತಾಲೂಕಿನ ಕಡಿವಾಣಕಟ್ಟೆ ಗ್ರಾಮದವರು. ಇಬ್ಬರ ಸಾವಿನಿಂದ ಕುಟುಂಬಸ್ಥರಲ್ಲಿ ದುಃಖ ಮಡುಗಟ್ಟಿದೆ.
ಕಾರು ಗುದ್ದಿರುವ ರಭಸಕ್ಕೆ ಇಬ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಚಿಕ್ಕ ವಯಸ್ಸಿಗೆ ಎಲ್ಲರನ್ನು ಬಿಟ್ಟು ಬಾರದೂರಿಗೆ ಹೋಗಿರುವ ಸಂಕಟವನ್ನು ಅಪ್ಪ ಅಮ್ಮನಿಂದ ತಡೆದುಕೊಳ್ಳಲಾಗುತ್ತಿಲ್ಲ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















