ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಜುಲೈ. 15 : ತಾಲ್ಲೂಕಿನ ತಳಕು ಸಮೀಪ ರಾಷ್ಟ್ರೀಯ ಹೆದ್ದಾರಿ ಹೊಸಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದೆ.
ಬಳ್ಳಾರಿ ಮೂಲದ ಗೋಪಿನಾಥ (55) ಪತ್ನಿ ಲಲಿತಾಮ್ಮ (45) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇನ್ನೂ ಕಾರಿನಲ್ಲಿದ್ದ ಗೋಪಿನಾಥ, ಮಕ್ಕಳಾದ ಶ್ರೀನಿವಾಸ್, ಶ್ರೇಯಾ ಹಾಗೂ ಚಾಲಕ ಸುರೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಗೆ ದಾಖಲಿಸಲಾಗಿದೆ.
ಮೃತ ದಂಪತಿಗಳು ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಇನ್ನೋವ ವಾಹನ ಮುಂಜಾನೇ 4.30 ರ ಸಮಯದಲ್ಲಿ ತಳಕು ಸಮೀಪದ ರಾಷ್ಟ್ರೀಯ ಹೆದ್ದಾರಿಯ ಹೊಸಹಳ್ಳಿ ಗೇಟ್ ಸಮೀಪ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮವಾಗಿ ಪತಿ ಹಾಗೂ ಪತ್ನಿ ಸ್ಥಳದಲ್ಲಿ ಸಾವನಪ್ಪಿದ್ದಾರೆ. ತಡೆಗೋಡೆಗೆ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.
ಅಪಘಾತ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ ಪಿ ಟಿ.ಬಿ.ರಾಜಣ್ಣ, ತುಳುಕು ಪಿಎಸ್ಐ ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರೀಶಿಲನೆ ನಡೆಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















