ಬೆಂಗಳೂರು: ಹಿರಿಯ ಪತ್ರಕರ್ತರು, ಸುದ್ದಿ ಟಿವಿ ಸಂಸ್ಥಾಪಕರಾಗಿದ್ದ ಶಶಿಧರ್ ಭಟ್ ಅವರಿಗೆ ಅನಾರೋಗ್ಯ ಕಾಡುತ್ತಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಚಿಕಿತ್ಸಾ ವೆಚ್ಚ ಭರಿಸುವ ಭರವಸೆ ನೀಡಿದ್ದಾರೆ.
‘ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ. ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ. ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ’ ಎಂದು ಪೋಸ್ಟ್ ಹಾಕಿದ್ದಾರೆ.

ಶಶಿಧರ್ ಭಟ್ ಅವರ ಈ ಪರಿಸ್ಥಿತಿ ಮಾಧ್ಯಮದವರು, ಹಿತೈಷಿಗಳು ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ. ಶಶಿಧರ್ ಭಟ್ ಅವರ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆಬಕೆಲ ಪತ್ರಕರ್ತರು ಸಹಾಯಕ್ಕೆ ಧಾವಿಸಿದ್ದಾರೆ. ಹಣಕಾಸಿನ ನೆರವು ಒದಗಿಸಲು ದಾರಿ ಹುಡುಕುತ್ತಿದ್ದಾರೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ಸಹಾಯಕ್ಕೆ ಬಂದಿರುವುದು, ಶಶಿಧರ್ ಭಟ್ ಅವರ ಕುಟುಂಬಕ್ಕೂ ಸ್ವಲ್ಪ ನೆಮ್ಮದಿ ತಂದಿದೆ.
ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಶಶಿಧರ್ ಭಟ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರೈ ಅವರು ಕೂಡ ಆಸ್ಪತ್ರೆಗೆ ಧಾವಿಸಿ, ಶಶಿಧರ್ ಭಟ್ ಅವರ ಆರೋಗ್ಯ ವಿಚಾರಿಸಿದ್ದಾರೆ. ನಿಮ್ಮ ಜೊತೆಗೆ ನಾವಿದ್ದೀವಿ ಎಂಬ ಧೈರ್ಯ ತುಂಬಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















