Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಅವರಿಂದ ಇಂದು ಡ್ಯಾಂಗಳು ತುಂಬಿ ತುಳುಕುತ್ತಿವೆ : ಹೆಚ್ಡಿಕೆ ವ್ಯಂಗ್ಯ

---Advertisement---

 

ದೆಹಲಿ: ರಾಜ್ಯದಲ್ಲಿ ಮಳೆ ಚೆನ್ನಾಗಿ ಬರುತ್ತಿದೆ. ಎಷ್ಟೋ ಕಡೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ರಸ್ತೆಗಳೇ ನಾಪತ್ತೆಯಾಗಿವೆ. ಡ್ಯಾಂಗಳಿಗೂ ಉತ್ತಮವಾಗಿ ನೀರು ಬಂದಿದ್ದು, ಜುಲೈ 27ಕ್ಕೆ ಕಾವೇರಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಹೀಗಾಗಿ ಜಲಸಂಪನ್ಮೂಲ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಭೆ ನಡೆಸಿದರು, ಪರಿಶೀಲನೆ ಮಡೆಸಿದರು. ಈ ಸಂಬಂಧ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

ಇಂದು ಡ್ಯಾಂಗಳೆಲ್ಲಾ ತುಂಬಿರುವುದು ಡಿಕೆ ಶಿವಕುನಾರ್ ಅವರಿಂದಾನೇ. ಗಂಗಾ ಆರತಿ ರೀತಿಯಲ್ಲಿ ಕಾವೇರಿ ಆರತಿ ಮಾಡಿದರೆ ಒಳ್ಳೆಯ ವಿಚಾರ. 5-6 ದಿನದಿಂದ ತಮಿಳುನಾಡಿಗೆ 5&6 ಟಿಎಂಸಿ ನೀರು ಹೋಗ್ತಿದೆ. ಜೂನ್ – ಜುಲೈ ತಿಂಗಳಿನ ಪಾಲಿಗಿಂತ ಹೆಚ್ಚು ನೀರು ಹೋಗಿದೆ. ತಮಿಳುನಾಡು ಸಿಎಂ ಸ್ಟಾಲಿನ್ ಅವರಿಗೂ ನಾನು ಹೇಳಿದ್ದು ಇಷ್ಟೆ. ತಮಿಳುನಾಡಿನ ಸಿಎಂ ಕರ್ನಾಟಕ ಪಾಲಿನ ನಡೆಯನ್ನು ತಿದ್ದುಕೊಳ್ಳಲಿ. ಕರ್ನಾಟಕ, ತಮಿಳುನಾಡಿಗೆ ಯಾವತ್ತು ಸಮಸ್ಯೆ ಮಾಡಿಲ್ಲ.

ನೀರು ಬಳಕೆ ಮಾಡುವ ದೃಷ್ಟಿಯಿಂದ ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಬೇಕು. ರಾಜ್ಯ ಸರ್ಕಾರ ಚಿಲ್ಲೃ ರಾಜಕಾರಣ ಮಾಡುತ್ತಿದೆ. ಕೇಂದ್ರ ಸರ್ಕಾರದ ಮಂತ್ರಿಗಳ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇನ್ನು ರಾಜ್ಯದಲ್ಲಿ ಬೆಂಬಿಡದೆ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅನಾಹುತವನ್ನೇ ಸೃಷ್ಟಿಸಿವೆ. ಜನ ಜೀವನ ಅಸ್ತವ್ಯಸ್ತವಾಗುತ್ತಿದೆ. ಶಾಲಾ-ಕಾಲೇಜಿಗೆ ಹೋಗುವ ಮಕ್ಕಳಿಗೂ ತಾಪತ್ರಯವಾಗುತ್ತಿದೆ. ಈ ಸಮಸ್ಯೆಯ ನಡುವೆಯೂ ಡ್ಯಾಂಗಳೆಲ್ಲಾ ತುಂಬುತ್ತಿದ್ದು, ಬೆಳೆಗೆ ನೀರು ಸಿಗುತ್ತಿದೆ ಎಂಬ ಸಂತಸ ರೈತರ ಮೊಗದಲ್ಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment