Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪಿ.ಡಿ.ಓ.ಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.24 : ಬೆಳೆ ಸಮೀಕ್ಷಾ ವರದಿಯನ್ನು ತಯಾರಿಸುವಲ್ಲಿ ನೀರಾವರಿ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡಿರುವ ದೊಡ್ಡಸಿದ್ದವ್ವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪಿ.ಡಿ.ಓ.ಗಳು ವಿಮಾ ಕಂಪನಿಗಳಿಗೆ ಕಳಿಸಿ ಬೇಜವಾಬ್ದಾರಿತನ ತೋರಿರುವುದರ ವಿರುದ್ದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ನೀರಾವರಿ ಪ್ರದೇಶಗಳಲ್ಲಿ ಬೆಳೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿರುವ ಪಿ.ಡಿ.ಓ.ಗಳು ಮಳೆಯಾಶ್ರಿತ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿರುವ ಮಾಹಿತಿಯನ್ನು ವಿಮಾ ಕಂಪನಿಗಳಿಗೆ ಕಳಿಸಿದ್ದರೆ ರೈತರಿಗೆ ಪರಿಹಾರ ಸಿಗುತ್ತಿತ್ತು. ಸಿಟು+೫೦ ಬೆಲೆ ನೀತಿಯ ಕೆಳಗೆ ಬೆಲೆ ಭದ್ರತೆ ಕಾಯ್ದೆ ಜಾರಿಗೊಳಿಸುವವರೆಗೂ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವಯಂ ವೆಚ್ಚ ಯೋಜನೆಯನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು. ಮತ್ತು ಆರ್.ಆರ್.ನಂಬರ್‌ಗಳಿಗೆ ಆಧಾರ್ ನಂಬರ್ ಜೋಡಣೆ ಮಾಡುವಂತೆ ಹೊರಡಿಸಿರುವ ಆದೇಶವನ್ನು ಹಿಂದಕ್ಕೆ ಪಡೆಯಬೇಕೆಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಕಾಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ ರೈತರ ಕೃಷಿಗೆ ಬಹುಮುಖ್ಯವಾಗಿ ಬೇಕಾಗಿರುವ ನೀರು ಹಾಗೂ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಿದರೆ ಎಲ್ಲಾ ಸಬ್ಸಿಡಿಗಳನ್ನು ಕೈಬಿಡುತ್ತೇವೆ. ಎಲ್ಲಿಯವರೆಗೂ ಈ ಸೌಕರ್ಯಗಳನ್ನು ಒದಗಿಸುವುದಿಲ್ಲವೋ ಅಲ್ಲಿಯತನಕ ಆರ್.ಆರ್.ನಂಬರ್‌ಗೆ ಆಧಾರ್ ಜೋಡಣೆ ಮಾಡುವುದಿಲ್ಲವೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆ ವೈದ್ಯರುಗಳ ಮೇಲೆ ಹಲ್ಲೆ ಮಾಡಿದವರಿಗೆ ಮೂರು ವರ್ಷ ಜೈಲು, ಐವತ್ತು ಸಾವಿರ ರೂ.ಗಳ ದಂಡ ವಿಧಿಸುವುದಾಗಿ ಶಾಸಕಾಂಗ ಸಭೆಯಲ್ಲಿ ಸಚಿವ ಸಂಪುಟ ತೀರ್ಮಾನಿಸಿದ್ದು, ಸದ್ಯದಲ್ಲಿಯೇ ಕಾಯ್ದೆ ಜಾರಿಯಾಗಲಿದೆ. ಆರೋಗ್ಯ ಸಿಬ್ಬಂದಿಗಳು ಎಷ್ಟು ಪರಿಣಿತರು ಎನ್ನುವುದನ್ನು ಪ್ರತಿ ವರ್ಷವೂ ತಪಾಸಣೆ ನಡೆಸಬೇಕು. ಕಾಪಿ ಹೊಡೆದು ಲಂಚ ಕೊಟ್ಟು ಸರ್ಟಿಫಿಕೇಟ್‌ಗಳನ್ನು ಪಡೆದುಕೊಂಡಿರುವ ಸಾಕಷ್ಟು ವೈದ್ಯರುಗಳು ಈಗಲೂ ಇರುವುದರಿಂದ ಆಸ್ಪತ್ರೆಗೆ ಬರುವ ಬಡ ರೋಗಿಗಳು ಈಗಲೂ ಉಳಿಸಿಕೊಳ್ಳಲು ಆಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಕೇಳಿದಷ್ಟು ಹಣ ಕೊಟ್ಟು ಬರೆದುಕೊಟ್ಟಂತ ಔಷಧಿಗಳನ್ನೆಲ್ಲಾ ತಂದರೂ ಕೊನೆಗೆ ಹೆಣ ಹಾಕಿಕೊಂಡು ಮನೆಗೆ ಹೋಗುವ ಹೀನ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತಹ ಸಂದರ್ಭಗಳಲ್ಲಿ ವೈದ್ಯರುಗಳ ಮೇಲೆ ಹಲ್ಲೆ ಮಾಡದೇ ಇರುತ್ತಾರೆಯೇ ಎಂದು ಖಾರವಾಗಿ ಈಚಘಟ್ಟದ ಸಿದ್ದವೀರಪ್ಪ ಪ್ರಶ್ನಿಸಿದರು?

ಸರ್ಕಾರದ ನಿಯಮಗಳನ್ನು ಮೀರಿ ಖಾಸಗಿ ಶಾಲೆಗಳಲ್ಲಿ ಮಕ್ಕಳಿಂದ ಡೊನೇಷನ್ ಪಡೆಯಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಎಷ್ಟು ಶುಲ್ಕವಿದೆಯೋ ಅಷ್ಠೆ ಶುಲ್ಕವನ್ನು ಪಡೆದು ಶಿಕ್ಷಣ ನೀಡಬೇಕು. ಈ ಸಂಬAಧ ಜಿಲ್ಲಾಧಿಕಾರಿ ಜೊತೆ ಹಲವಾರು ಸಭೆ ನಡೆಸಿದ್ದೇವೆ. ಆದರೂ ಖಾಸಗಿ ಶಾಲೆಯವರು ಪೋಷಕರುಗಳಿಂದ ಹಣ ಸುಲಿಗೆ ಮಾಡುತ್ತಿರುವುದು ಇನ್ನು ನಿಂತಿಲ್ಲ ಎಂದು ಆಪಾದಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ಆರ್.ಬಿ.ನಿಜಲಿಂಗಪ್ಪ, ಹನುಮಂತರೆಡ್ಡಿ
ಚAದ್ರಮೌಳಿ, ಎಂ.ಟಿ.ಸತೀಶ್‌ರೆಡ್ಡಿ, ಎಂ.ಬಸವರಾಜಪ್ಪ, ತಿಮ್ಮಾರೆಡ್ಡಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment