Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಗಣಿಭಾದಿತ ಪ್ರದೇಶಗಳ ಕುಟುಂಬಗಳಿಗೆ ಉದ್ಯೋಗ ನೀಡುವಂತೆ ಧರಣಿನಿರತರಿಂದ ಜಿಲ್ಲಾಧಿಕಾರಿಗೆ ಮನವಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ ‌.24 : ಗಣಿಭಾದಿತ ಪ್ರದೇಶಗಳಾದ ಕಾಗಳಗೆರೆ, ಡಿ.ಮದಕರಿಪುರ, ತಣಿಗೆಹಳ್ಳಿ, ಮುತ್ತುಗದೂರು, ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ 52 ಲಾರಿಗಳನ್ನು ಕೆಲವು ತಿಂಗಳುಗಳ ಕಾಲ ಗಣಿಗಾರಿಕೆಗೆ ಬಳಸಿಕೊಂಡು ಏಕಾಏಕಿ ಹೊರಗಿಟ್ಟಿರುವುದನ್ನು ವಿರೋಧಿಸಿ ಸಿರಿಗೆರೆಯ ಡಿ.ಮದಕರಿಪುರ ಸಮೀಪ ಕಳೆದ ಐದು ದಿನಗಳಿಂದಲೂ ಧರಣಿ ನಡೆಸುತ್ತಿರುವವರು ನ್ಯಾಯ ಒದಗಿಸುವಂತೆ ಬುಧವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬಂಜಾರ ಲಂಬಾಣಿ ಸಮಾಜ, ದಲಿತ ಸಂಘರ್ಷ ಸಮಿತಿ, ವಾಲ್ಮೀಕಿ ಸೇನೆ, ಅಂಬೇಡ್ಕರ್ ಸೇನೆ ಇವರುಗಳ ಜೊತೆಗೂಡಿ ಧರಣಿ ನಡೆಸುತ್ತಿರುವವರು ಸ್ಥಳೀಯರಿಗೆ ಕೆಲಸ ಕೊಡಬೇಕೆಂಬ ನಿಯಮವಿದ್ದರೂ ಜಾನ್ ಮೈನ್ಸ್ ಮತ್ತು ವೇದಾಂತ ಮೈನ್ಸ್‌ ನವರು ಇಲ್ಲಸಲ್ಲದ ಸಬೂಬು ಹೇಳಿ ಐವತ್ತೆರಡು ಕುಟುಂಬಗಳ ಲಾರಿಯನ್ನು ಕೆಲಸಕ್ಕೆ ತೆಗೆದುಕೊಳ್ಳದೆ ದರ್ಪ ತೋರುತ್ತಿದ್ದಾರೆ. ಫೈನಾನ್ಸ್ ಗಳಿಂದ ಸಾಲ ಪಡೆದು ಲಾರಿ ಖರೀದಿಸಿರುವವರು ಅದಿರು ಸಾಗಾಣಿಕೆ ಮಾಡಲು ಅವಕಾಶವಿಲ್ಲದೆ ಪ್ರತಿ ತಿಂಗಳ ಕಂತಿನ ಹಣ ಮೂವತ್ತು ಸಾವಿರ ರೂ.ಗಳನ್ನು ಕಟ್ಟಲು ಪರದಾಡುತ್ತಿದ್ದಾರೆ. ಇದರ ನಡುವೆ ಕುಟುಂಬ ನಿರ್ವಹಣೆ ಮಕ್ಕಳ ಶಿಕ್ಷಣಕ್ಕೂ ಸಂಚಕಾರವಾಗಿದೆ.

ಗಣಿ ಧೂಳಿಗೆ ಸುತ್ತಮುತ್ತಲಿನ ಬೆಳೆಗಳು ನಾಶವಾಗುತ್ತಿವೆ. ಅನೇಕ ಬಾರಿ ಜಾನ್ ಮೈನ್ಸ್ ಮತ್ತು ವೇದಾಂತ ಮೈನ್ಸ್ನವರಿಗೆ ಸ್ಥಳೀಯರಿಗೆ ಕೆಲಸ ಕೊಡಿ ಎಂದು ಬೇಡಿಕೊಳ್ಳುತ್ತಿದ್ದರೂ ಹೊರಗಿನವರಿಗೆ ಉದ್ಯೋಗ ಕೊಡುತ್ತಿರುವುದು ಯಾವ ನ್ಯಾಯ? ಹಾಗಾಗಿ ತಾವುಗಳು ಮಧ್ಯ ಪ್ರವೇಶಿಸಿ 52 ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು.

ಜಿಲ್ಲಾ ಬಂಜಾರ ಲಂಬಾಣಿ ಸಮಾಜದ ಅಧ್ಯಕ್ಷ ಎಂ.ಸತೀಶ್‌ಕುಮಾರ್, ಪ್ರಸನ್ನಕುಮಾರ್, ಸುಂದರಮೂರ್ತಿ, ರಾಜಣ್ಣ, ತಿಪ್ಪೇಶ್, ಶ್ರೀನಿವಾಸ್, ಪ್ರಭಾಕರ್, ಉಮಾಪತಿ ಈ ಸಂದರ್ಭದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!