ಸುದ್ದಿಒನ್, ಚಳ್ಳಕೆರೆ, ಜುಲೈ. 24 : ಅಂಗನವಾಡಿ ಕೇಂದ್ರದ ಬೀಗ ಮುರಿದು ಕಳವು ಮಾಡಿದ ಪ್ರಕರಣ ಇಂದು ಬೆಳಕಿಗೆ ಬಂದಿದೆ.
ನಗರದ ಟಿ.ಎ. ಟಿ. ಟಾಕೀಸ್ ಹಿಂಭಾಗದ ಅಂಗನವಾಡಿ ಕೇಂದ್ರದ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಅಂಗನವಾಡಿ ಅಡಿಗೆ ಕೋಣೆಯಲ್ಲಿದ್ದ ಕುಕ್ಕರ್, ಪಾತ್ರೆ, ಬಕೆಟ್ ಸೇರಿದಂತೆ ಅಡುಗೆ ಮಾಡುವ ಸಾಮಾಗ್ರಿಗಳನ್ನು ಕಳವು ಮಾಡಿದ್ದಾರೆ.
ಒಂದೇ ಸ್ಥಳದಲ್ಲಿ ನಾಲ್ಕು ಅಂಗನವಾಡಿ ಕೇಂದ್ರಗಳಿದ್ದು ಮತ್ತೊಂದು ಅಂಗನವಾಡಿ ಕೇಂದ್ರ ಬೀಗ ಒಡೆಯಲು ಮುಂದಾಗಿದ್ದು ಕಳವು ಪ್ರಕರಣ ವಿಫಲರಾಗಿದ್ದಾರೆ.
ಎಂದಿನಂತೆ ಅಂಗನವಾಡಿ ಕೇಂದ್ರ ಶಿಕ್ಷಕಿ ಕರ್ತವ್ಯಕ್ಕೆ ಬಂದಾಗ ಕಳವು ಪ್ರಕರಣ ಬೆಳಕಿಗೆ ಬಂದಿದ್ದು ತಕ್ಷಣ ಇಲಾಖೆ ಅಧಿಕಾರಿ ಹಾಗೂ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಕಾನ್ ಸ್ಟೇಬಲ್ ಲಿಂಗರಾಜು ಹಾಗೂ ಶಂಕರ್ ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











