ಸುದ್ದಿಒನ್, ಜುಲೈ. 25 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಬಳಿಯ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬುಧವಾರ ರಾತ್ರಿ ಅಪಘಾತ ಸಂಭವಿಸಿ ಓರ್ವ ವ್ಯಕ್ತಿಗೆ ಗಂಭೀರವಾಗಿ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ಲಾರಿಗಳು ಚತುಷ್ಪತ ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ ಹಿಂಬದಿಯಿಂದ ಓವರ್ ಟೇಕ್ ಮಾಡುವಾಗ ಮುಂದೆ ಚಲಿಸುತ್ತಿದ್ದ ಹಾಲಿನ ವಾಹನಕ್ಕೆ ಹಿಂಬದಿಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಎರಡೂ ಲಾರಿಗಳು ನೆಲಕ್ಕುರುಳಿವೆ. ಅಪಘಾತದಲ್ಲಿ ಓರ್ವ ವ್ಯಕ್ತಿಯ ಕಾಲಿಗೆ ಗಂಭೀರವಾಗಿ ಪೆಟ್ಟಾಗಿದ್ದು ಆತನನ್ನು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















