Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜವಾಹರ್ ನವೋದಯ ವಿದ್ಯಾಲಯ : ಪ್ರವೇಶಕ್ಕೆ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ. ಜುಲೈ.25: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯಕ್ಕೆ 2025-26ನೇ ಸಾಲಿನ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಯ 5ನೇ ತರಗತಿ ಮಕ್ಕಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು 2013ರ ಜೂನ್ 1 ರಿಂದ 2015ರ ಜುಲೈ 31ರೊಳಗೆ ಜನಿಸಿರಬೇಕು. 3 ಮತ್ತು 4ನೇ ತರಗತಿ ಉತ್ತೀರ್ಣರಾಗಿರಬೇಕು. 2024-25 ರಲ್ಲಿ ವ್ಯಾಸಂಗ ಮಾಡುತ್ತಿದ್ದು, ಈ ಶೈಕ್ಷಣಿಕ ವರ್ಷವನ್ನು ಸಂಪೂರ್ಣವಾಗಿ ಪೂರೈಸಿರಬೇಕು. ಶಾಲೆಯ ಕನಿಷ್ಠ ಶೇ.75ರಷ್ಟು ಸೀಟುಗಳನ್ನು ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಹಾಗೂ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಮೀಸಲಾಗಿರುತ್ತವೆ. ಕನಿಷ್ಟ 1/3 ರಷ್ಟು ಸೀಟುಗಳನ್ನು ಹೆಣ್ಣುಮಕ್ಕಳಿಗೆ ಮೀಸಲಿಡಲಾಗಿದೆ.

ಮೀಸಲಾತಿ ಕೋಟಾದಲ್ಲಿ ಆಯ್ಕೆಯಾದ ಎಸ್.ಸಿ, ಎಸ್.ಟಿ, ಒಬಿಸಿ, ಇಡಬ್ಲೂಎಂಎಸ್ ಮತ್ತು ಸಾಮಾನ್ಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ತೃತೀಯ ಲಿಂಗಿಗಳು, ನಗರ, ಗ್ರಾಮೀಣ ಪ್ರದೇಶದ ಮೀಸಲಾತಿ ಬಯಸುವವರು ಕೇಂದ್ರ ಸರ್ಕಾರ ನಿಗದಿ ಪಡಿಸಿದ ಪ್ರಮಾಣ ಪತ್ರಗಳನ್ನು ದಾಖಲಾತಿ ಪರಿಶೀಲನೆ ಸಂದರ್ಭದಲಿ ಸಲ್ಲಿಸಬೇಕು.

ಆಸಕ್ತ ಅಭ್ಯರ್ಥಿಗಳು  https://cbseitms.rcll.gov.in/nvs.index.registration     ತಂತ್ರಾAಶದ ಮೂಲಕ ಸೆಪ್ಟೆಂಬರ್ 9ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಾಚಾರ್ಯ ಆರ್.ಡ್ಯಾನಿಯಲ್ ರತನ್ ಕುಮಾರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...