Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಟ್ ಕಾಯಿನ್ ಪ್ರಕರಣ : ರಾಕೇಶ್ ಸಿದ್ದರಾಮಯ್ಯ ಫೋಟೋ ಹಂಚಿಕೊಂಡ ಬಿಜೆಪಿ

Facebook
Twitter
Telegram
WhatsApp

 

ಬೆಂಗಳೂರು: ಬಿಟ್ ಕಾಯಿನ್ ಕೇಸ್ ಗೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್ ಅಂಡ್ ಟರ್ನಿಂಗ್ ಸಿಗ್ತಾನೆ ಇದೆ. ಬಿಜೆಪಿಗರು ಇದರಲ್ಲಿ ಭಾಗಿಯಾಗಿದ್ದಾರೆ ಅಂತ ಕಾಂಗ್ರೆಸ್ ನವರು ಆರೋಪಿಸುತ್ತಲೆ ಇದ್ದಾರೆ. ಇದೀಗ ಬಿಜೆಪಿ ತನ್ನ ಅಧಿಕೃತ ಖಾತೆಯಲ್ಲಿ ರಾಕೇಶ್ ಸಿದ್ದರಾಮಯ್ಯ ಅವರ ಫೋಟೋವೊಂದನ್ನ ಹಂಚಿಕೊಂಡಿದೆ.

ಮಾನ್ಯ ಸಿದ್ದರಾಮಯ್ಯ ಅವರೇ, ರಾಜ್ಯದಲ್ಲಿ ನಡೆದಿದೆ ಎನ್ನಲಾದ #BitCoin ಹಗರಣದ ಬಗ್ಗೆ ತಾವು ಪ್ರಸ್ತಾಪಿಸಿದ್ದೀರಿ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ, ಅದನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ. ಉತ್ತರಿಸಿ…..

ಬಿಟ್ ಕಾಯಿನ್ ಹ್ಯಾಕರ್ ಶ್ರೀಕಿ ಜೊತೆಗೆ ಹೇಮಂತ್ ಮುದ್ದಪ್ಪ ಹಾಗೂ ಸುನೀಶ್ ಹೆಗ್ಡೆ ಗಾಢ ಸ್ನೇಹ ಹೊಂದಿದ್ದರು. ಶ್ರೀಕಿ ಮೂಲಕ ಗೇಮಿಂಗ್ ಸೈಟ್ & ಇ-ಪೋರ್ಟಲ್ ಹ್ಯಾಕ್ ಮಾಡಿಸಿದ್ದರು ಎಂಬುದು ಪೊಲೀಸ್ ದಾಖಲೆಯಲ್ಲಿದೆ!? ಇಲ್ಲಿ ನೋಡಿ, ಸುನೀಶ್ ಹೆಗ್ಡೆ & ಹೇಮಂತ್ ಯಾರ ಜೊತೆಗಿದ್ದಾರೆ ಎಂದು ಒಮ್ಮೆ ನೋಡಿ.

ಮಾನ್ಯ ಸಿದ್ದರಾಮಯ್ಯ ಅವರೇ, ಈ ಚಿತ್ರದಲ್ಲಿರುವ ಸುನೀಶ್ ಹೆಗ್ಡೆ & ಹೇಮಂತ್ ಜೊತೆಗಿರುವ ಎಲ್ಲರನ್ನು ನೀವು ಗುರುತಿಸಬಲ್ಲಿರಿ ಎಂಬುದು ನಮ್ಮ ನಂಬಿಕೆ. ಆ ನಂಬಿಕೆ ನಿಜವೇ ಆದರೆ #Bitcoin ಹ್ಯಾಕಿಂಗ್ ದಂಧೆ ನಿಮ್ಮ ಕಾಲದಲ್ಲೇ ಆರಂಭವಾಗಿತ್ತು. ಸಿದ್ದರಾಮಯ್ಯನವರೇ, ಆ ಬಗ್ಗೆ ನೀವು ಸ್ಪಷ್ಟ ಮಾಹಿತಿ ಹೊಂದಿದ್ದೀರಿ ಅಲ್ಲವೇ?.

 

ಮಾನ್ಯ ಸಿದ್ದರಾಮಯ್ಯನವರೇ,
√ ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಅವ್ಯವಹಾರ ಬಹಿರಂಗವಾಗಿದ್ದು ನಿಮ್ಮ ಕಾಲದಲ್ಲಿ.
√ ಒಂದೆರಡು ಕಡೆ ದಾಳಿ ನಡೆದರೂ ತನಿಖೆ ಹಠಾತ್ ಸ್ಥಗಿತಗೊಂಡಿತು.
ಮಾನ್ಯ ಸಿದ್ದರಾಮಯ್ಯನವರೇ,

√ ಬೆಂಗಳೂರಿನ ಪ್ರತಿಷ್ಠಿತ‌ ಹೊಟೇಲ್‌ನಲ್ಲಿ ನಡೆಯುತ್ತಿದ್ದ ಹುಕ್ಕಾ ಬಾರ್ ಆ ಎಲ್ಲ ಚಟುವಟಿಕೆಯ ಕೇಂದ್ರವಾಗಿತ್ತು.

√ ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ, ಶ್ರೀಕಿಯಂಥವರು ಆಗ ನಿಮ್ಮ ಮನೆಯ ಸುತ್ತಮುತ್ತಲೂ ಓಡಾಡಿರಲೂ ಬಹುದಲ್ಲವೇ!?

ನಿಮ್ಮ ಅವಧಿಯಲ್ಲಿ ನಡೆದ ಈ ಹಗರಣವನ್ನು ಮುಚ್ಚಿ ಹಾಕುವುದು ನಿಮಗೆ ತೀರಾ ಅನಿವಾರ್ಯವಾಗಿತ್ತು. ಅಪ್ರಿಯವಾದ ಸತ್ಯ ಹೇಳುತ್ತೇವೆ, ಇಲ್ಲಿ ನಿಮ್ಮ ಅತ್ಯಾಪ್ತರೇ ಇದ್ದರು ಎಂಬ ಅನುಮಾನಕ್ಕೆ ಈ ಚಿತ್ರ ಪುಷ್ಠಿ ನೀಡುತ್ತಿದೆ. ಸತ್ಯ ಅನಾವರಣವಾಗುವ ಭಯಕ್ಕೆ ನೀವು UTurn ತೆಗೆದುಕೊಳ್ಳುತ್ತಿದ್ದೀರಿ ಅಲ್ಲವೇ? ಎಂದು ಫೋಟೋ ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಚಿನ್ನದ ದರದಲ್ಲಿ ತುಸು ಇಳಿಕೆ : ಎಷ್ಟಿದೆ ಇವತ್ತಿನ ಬೆಲೆ..?

ಚಿನ್ನದ ದರದಲ್ಲಿ ಇನ್ನು ಹಾವು ಏಣಿ ಆಟ ಆಡುವುದು ನಿಂತಿಲ್ಲ. ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಒಂದು ಗ್ರಾಂಗೆ ಹದಿನೈದು ರೂಪಾಯಿ ಅಷ್ಟು ಕಡಿಮೆಯಾಗಿದೆ‌. ಈ ಮೂಲಕ 22 ಕ್ಯಾರಟ್ ನ ಒಂದು

ಮತ್ತೆ ಶುರುವಾಯ್ತು ರೋಹಿಣಿ-ರೂಪ ಪ್ರಕರಣ ಸದ್ದು : ಅಂದು ರೋಹಿಣಿ.. ಇಂದು ರೂಪ ಮಾನನಷ್ಟ ಮೊಕದ್ದಮೆ‌ ದಾಖಲು..!

ಕಳೆದ ವರ್ಷವಷ್ಟೇ ಐಎಎಸ್‌ ಅಧಿಕಾರಿ ರೋಹಿಣಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವೆ ಮಾತಿನ ವಾಕ್ಸಮರ ನಡೆದಿತ್ತು. ದೂರುಗಳು ದಾಖಲಾಗಿತ್ತು. ಆದರೆ ಇದೀಗ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ರೋಹಿಣಿ

ಚಿಕಿತ್ಸೆಗೆಂದು ಅಮೆರಿಕಾಗೆ ತೆರಳುತ್ತಿರುವ ಶಿವಣ್ಣ : ಸುದೀಪ್, ಬಿಸಿ ಪಾಟೀಲ್ ಸೇರಿದಂತೆ ಆತ್ಮೀಯರಿಂದ ಹಾರೈಕೆ

ಶಿವರಾಜ್‍ಕುಮಾರ್ ಕನ್ನಡದ ಕಣ್ಮಣಿ. ಕನ್ನಡ ಇಂಡಸ್ಟ್ರಿಯ ದೊಡ್ಮನೆಯ ಕುಡಿ. ವರ್ಷಕ್ಕೆ ಹಲವು ಸಿನಿಮಾಗಳನ್ನು ಮಾಡುವ ಮೂಲಕ ನಿರ್ದೇಶಕ, ನಿರ್ಮಾಪಕರನ್ನು ಉಳಿಸುತ್ತಿರುವ ಶಿವಣ್ಣ ಅವರಿಗೆ ಅನಾರೋಗ್ಯ ಕಾಡುತ್ತಿದೆ. ಈಗಾಗಲೇ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿರುವ ಶಿವಣ್ಣ, ಸರ್ಜರಿಯೊಂದು ಬಾಕಿ

error: Content is protected !!