ಸುದ್ದಿಒನ್, ಜುಲೈ. 27 : ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ ದಿನೇ ದಿನೇ ಹೆಚ್ಚುತ್ತಿದ್ದು ಹೃದಯ ಸಂಬಂಧಿ ಶ್ವಾಸಕೋಶದ ಸಂಬಂಧಿ ಖಾಯಿಲೆಗಳಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದ್ದು ಇದಕ್ಕೆ ಪರಿಹಾರ ನಮ್ಮ ಪರಿಸರದ ಸ್ವಚ್ಚತೆಯ ಜೊತೆಗೆ ಕಾಡನ್ನು ರಕ್ಷಿಸಿ ಬೆಳೆಸವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ವಿದ್ಯಾರ್ಥಿನಿ ಕೀರ್ತನಾ ಎಸ್ ಯು ಹೇಳಿದರು.
ಅವರು ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಶನಿವಾರ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಕಾರ್ಯಕ್ರಮದ ವಿಶೇಷತೆಯ ಕುರಿತು ‘ಕಾಡಿದ್ದರೆ ನಾಡು, ನಾಡಿದ್ದರೆ ನಾವು’ ‘ಗಿಡ ಬೆಳೆಸಿ ಪರಿಸರ ಉಳಿಸಿ ಎಂಬ ವಿಷಯದ ಕುರಿತು ಭಾಚಣ ಮಾಡಿದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ.ಹೆಚ್. ಕೆ.ಎಸ್. ಸ್ವಾಮಿ ಅವರು
‘ಕಸದಿಂದ ರಸ’ ಎಂಬಂತೆ ನಿರುಪಯುಕ್ತ ವಸ್ತುಗಳನ್ನು ಮರುಬಳಕೆ ಮಾಡಲು ತಾವು ತಂದ ಮಾದರಿಗಳನ್ನು ತೋರಿಸುತ್ತಾ ಉತ್ತೇಜಿಸಿದರು. ಗಾಂಧೀಜಿಯವರ ಕನಸಾದ ಸ್ವದೇಶಿ ವಸ್ತುಗಳ ಬಳಕೆ ಹಾಗೂ ಚರಕದ ಉಪಯೋಗದ ಬಗ್ಗೆ ತಿಳಿಸದರು. ಪ್ಲಾಸ್ಟಿಕ್ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ ಎಂದು ತಿಳಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಸಮೃದ್ಧ ಪರಿಸರ ಮತ್ತು ಜಲಸಂರಕ್ಷಣೆಗೆ ಅಗತ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಸ್.ಎಂ.ಪೃಥ್ವೀಶ ಮುಖ್ಯೋಪಾಧ್ಯಾಯ ತಿಪ್ಪೇಸ್ವಾಮಿ ಎನ್.ಜಿ, ಐಸಿಎಸ್‌ಸಿ ಪ್ರಾಚಾರ್ಯ ಬಸವರಾಜಯ್ಯ ಪಿ., ಉಪಪ್ರಾಚಾರ್ಯ ಅವಿನಾಶ್.ಬಿ. ಶಿಕ್ಷಕ/ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ ಡಾ.ಹೆಚ್ ಕೆ ಎಸ್ ಸ್ವಾಮಿ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಸುಪ್ರಿತಾ ನಿರೂಪಿಸಿದರು, ನುರೈನ್ ಸ್ವಾಗತಿಸಿ, ವಂದಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.




















