ಅರೆ ಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿ ಅರ್ಜಿ ಆಹ್ವಾನ

1 Min Read

 

ಚಿತ್ರದುರ್ಗ. ಜುಲೈ.27: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕು ಕಾನೂನು ಸೇವಾ ಸಮಿತಿಗಳಿಗೆ ಅರೇ ಕಾಲಿಕ ಕಾನೂನು ಸ್ವಯಂ ಸೇವಕರ (Para Legal Volunteers) ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.‌

ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವರು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಕಾನೂನು ವಿದ್ಯಾರ್ಥಿಗಳು, ಅಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು, ನಿವೃತ್ತ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಮತ್ತು ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವ ಸಹಾಯ
ಸಂಘಗಳ ಸದಸ್ಯರು ಅರ್ಜಿಸಲ್ಲಿಸಬಹದು.

ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿಗದಿತ ಅರ್ಜಿ ನಮೂನೆಯಲ್ಲಿ ತಮ್ಮ ವೈಯಕ್ತಿಕ ವಿವರಗಳನ್ನು ಸ್ವ ಹಸ್ತಾಕ್ಷರದಿಂದ ಭರ್ತಿ ಮಾಡಿ, ಆಯಾ ತಾಲ್ಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿಗಳಿಗೆ, ದಿನಾಂಕ 02-08-2024 ರ ಸಂಜೆ 5.00ರ ಒಳಾಗಾಗಿ ಖುದ್ದು ಸಲ್ಲಿಸಬೇಕು. ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಕಳೆದ ವರ್ಷದಲ್ಲಿ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (PLV) ನೇಮಕಗೊಂಡು ಮುಂದಿನ ವರ್ಷಕ್ಕೆ ಕರ್ತವ್ಯ ನಿರ್ವಹಿಸಲು ಆಸಕ್ತರಿರುವವರು ಒಪ್ಪಿಗೆ ಪತ್ರವನ್ನು ಮೇಲೆ ಹೇಳಿದ ದಿನಾಂಕದೊಳಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಲು ಸೂಚಿಸಲಾಗಿದೆ. ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕೆಲಸ ನಿರ್ವಹಿಸಲು ಯಾವುದೇ ರೀತಿಯಾದ ವೇತನ ಇರುವುದಿಲ್ಲ. ರಾಜ್ಯ ಕಾನೂನು ಸೇವಾ ಪ್ರಾಧಿಕಾರರವರ ನಿರ್ದೇಶನದಂತೆ ಯಾವುದಾದರೂ ಕಾನೂನು ಸೇವಾ ಕೇಂದ್ರಗಳಿಗೆ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (PLV) ನೇಮಿಸಿದ್ದಲ್ಲಿ ಪ್ರತಿ ಕೆಲಸದ ದಿನಕ್ಕೆ ರೂ. 250/- ಮೀರದಂತೆ ಗೌರವಧನ ನಿಗಧಿಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *