ಬೆಂಗಳೂರು: ಬಿಟ್ ಕಾಯಿನ್ ವಿಚಾರ ರಾಜ್ಯ ಹಾಗೂ ರಾಷ್ಟ್ರೀಯ ರಾಜಕಾರಣದಲ್ಲಿ ಸಾಕಷ್ಟು ಸದ್ದು ಮಾಡ್ತಿದೆ. ಬಿಜೆಪಿಗರು ಬಿಟ್ ಕಾಯಿನ್ ಪ್ರಕರಣದಲ್ಲಿದ್ದಾರೆ ಅಂತ ಕಾಂಗ್ರೆಸ್ ಆರೋಪ ಮಾಡುತ್ತಲೇ ಬಂದಿದೆ. ಇದಜ್ಕೆ ಬಿಜೆಪಿ ಕೂಡ ತಿರುಗೇಟು ನೀಡುತ್ತಿದೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಅವರ ಮಗ ದಿ.ರಾಕೇಶ್ ಸಿದ್ದರಾಮಯ್ಯ ಫೋಟೋ ಹಾಕಿ ಸದ್ದು ಮಾಡಿತ್ತು. ಇದೀಗ ಸಿದ್ದರಾಮಯ್ಯ ಮೋದಿ ಫೋಟೋ ಹಾಕಿ ತಿರುಗೇಟು ನೀಡಿದ್ದಾರೆ.
ರಾಕೇಶ್ ಜೊತೆಗೆ
ಬಿಟ್‌ಕಾಯಿನ್ ಹಗರಣದ ಆರೋಪಿ ಶ್ರೀಕೃಷ್ಣನ ಗೆಳೆಯ ಹೇಮಂತ್ ಮುದ್ದಪ್ಪ ಇದ್ದಾನೆ ಎಂದು ಬಿಜೆಪಿ ಆರೋಪಿಸಿದೆ.ಹಾಗಿದ್ದರೆ 2018ರಲ್ಲಿ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ @PMOIndia ಜೊತೆಗಿರುವ
ಬ್ಯಾಂಕ್ ಲೂಟಿಕೋರ ನೀರವ್ ಮೋದಿಯ ಪೋಟೊವನ್ನು ಹೇಗೆ ವ್ಯಾಖ್ಯಾನಿಸುವುದು?
3/7 pic.twitter.com/7znZHXfzT3— Siddaramaiah (@siddaramaiah) November 18, 2021
ನೀರವ್ ಮೋದಿ ಜೊತೆ ನರೇಂದ್ರ ಮೋದಿ ಇರುವ ಗ್ರೂಪ್ ಫೋಟೋ ಹಾಕಿ ಇದಕ್ಕೇನು ಅರ್ಥ ಎಂದು ಪ್ರಶ್ನಿಸಿದ್ದಾರೆ. ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು @BJP4Karnataka
ಅಗಲಿ ಹೋಗಿರುವ ನನ್ನ ಮಗನ ಹೆಸರನ್ನು ಎಳೆದು ತಂದಿದೆ. ಸರು, ನಮ್ಮ ಸರ್ಕಾರದ ಅವಧಿಯನ್ನೂ ಸೇರಿಸಿ ಬಿಟ್ ಕಾಯಿನ್ ಹಗರಣವನ್ನು ಸುಪ್ರೀಮ್ ಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಸಿಎಂ ಅವರನ್ನು ಒತ್ತಾಯಿಸುತ್ತೇನೆ.
ನನ್ನ ಮಗ ರಾಕೇಶ್ ನಮ್ಮನಗಲಿ ಐದು ವರ್ಷಗಳಾಗಿವೆ, ಪುತ್ರಶೋಕ ನಿರಂತರ. ತನ್ನ ಮೇಲಿನ ಆರೋಪಕ್ಕೆ ಆತ ಪ್ರತಿಕ್ರಿಯಿಸಲೂ ಸಾಧ್ಯವಿಲ್ಲ. ಇಂತಹ ಸಮಯದಲ್ಲಿ ನನ್ನ ದಿವಂಗತ ಮಗನ ಹೆಸರನ್ನು ಎಳೆದು ರಾಜಕೀಯ ಮಾಡಲು ಹೊರಟಿರುವುದು “ಅತ್ಯಂತ ವೈಯಕ್ತಿಕ ಮತ್ತು ಕ್ಷುಲಕತನದ’ ರಾಜಕಾರಣ.
ರಾಕೇಶ್ ಜೊತೆಗೆ ಬಿಟ್‌ಕಾಯಿನ್ ಹಗರಣದ ಆರೋಪಿ ಶ್ರೀಕೃಷ್ಣನ ಗೆಳೆಯ ಹೇಮಂತ್ ಮುದ್ದಪ್ಪ ಇದ್ದಾನೆ ಎಂದು ಬಿಜೆಪಿ ಆರೋಪಿಸಿದೆ.
ಹಾಗಿದ್ದರೆ 2018ರಲ್ಲಿ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ @PMOIndia ಜೊತೆಗಿರುವ ಬ್ಯಾಂಕ್ ಲೂಟಿಕೋರ ನೀರವ್ ಮೋದಿಯ ಪೋಟೊವನ್ನು ಹೇಗೆ ವ್ಯಾಖ್ಯಾನಿಸುವುದು? ಎಂದು ಪ್ರಶ್ನಿಸಿದ್ದಾರೆ.