ಹಾಸನ: ವಿಧಾನ ಪರಿಷತ್ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಎಲ್ಲಾ ಪಕ್ಷಗಳು ಗರಿಗೆದರಿವೆ. ಚುನಾವಣಾ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿವೆ. ಇತ್ತ ಜೆಡಿಎಸ್ ನಲ್ಲಿ ಮತ್ತೆ ಕುಟುಂಬದ ಕುಡಿಗೆ ಟಿಕೆಟ್ ಘೋಷಣೆಯಾಗಿದೆ.
ಪರಿಷತ್ ಚುನಾವಣೆಗೆ ಜೆಡಿಎಸ್ ನಿಂದ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಸಿಗುತ್ತೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದರು. ಆದ್ರೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸೂರಜ್ ರೇವಣ್ಣ ಅವರಿಗೆ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಿದ್ದಾರೆ.
ಈ ಸಂಬಂಧ ಮಾಹಿತಿ ನೀಡಿದ ಅವರು, ಹಾಸನದಿಂದ ಸೂರಜ್ ರೇವಣ್ಣ ಸ್ಪರ್ಧಿಸಲಿದ್ದಾರೆ. ಶಾಸಕರು, ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿಯೇ ಈ ನಿರ್ಧಾರಕ್ಕೆ ಬಂದಿದ್ದೇವೆ. ನಾಳೆ ಸೂರಜ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದಿದ್ದಾರೆ.
ಕೆಲವು ದಿನಗಳಿಂದ ಪರಿಷತ್ ಚುನಾವಣೆಗೆ ದೇವೇಗೌಡರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿಯಾಗುತ್ತೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದ್ರೆ ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಹಾಸನದಲ್ಲಿ ಜೆಡಿಎಸ್ ಪಕ್ಷಕ್ಕೆ ಸ್ಟ್ರಾಂಗ್ ಅಭ್ಯರ್ಥಿಯ ಅಗತ್ಯವಿದೆ ಎಂದು ಪಕ್ಷದಲ್ಲಿ ಯೋಚನೆ ಮಾಡಲಾಗಿತ್ತು. ಅದಕ್ಕಾಗಿಯೇ ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್ ಸರಿಯಾದ ಅಭ್ಯರ್ಥಿ ಎಂದು ತೀರ್ಮಾನಿಸಿ, ಇಂದು ಅಧಿಕೃತ ಘೋಷಣೆ ಮಾಡಿದ್ದಾರೆ.