Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ 05 ರಂದು ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷರಾದ ವಾಣಿ ಕೆ ಶಿವರಾಂರವರಿಗೆ ಅಭಿನಂದನಾ ಸಮಾರಂಭ

---Advertisement---

ಗುಬ್ಬಿ : ಗುಬ್ಬಿ ತಾಲೂಕು ಛಲವಾದಿ ಮಹಾಸಭಾ ವತಿಯಿಂದ  ಆಗಸ್ಟ್ 05 ರಂದು ರಾಜ್ಯಾಧ್ಯಕ್ಷರಾದ ವಾಣಿ ಕೆ ಶಿವರಾಂರವರಿಗೆ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ಸದಸ್ಯರಾದ ಮೋಹನ್ ಕುಮಾರ್ ದಾಸಪ್ಪ ನವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

ಸಮಾಜದ ಪಟ್ಟಣ ಪಂಚಾಯಿತಿ ಸದಸ್ಯರುಗಳಿಗೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳಿಗೆ ಸನ್ಮಾನ ಹಾಗೂ ಸದಸ್ಯತ್ವ ಅಭಿಯಾನ ಮತ್ತು 2023- 24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 75ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಪಟ್ಟಣದ ಎಸ್ ಎಂ ಪ್ಯಾಲೆಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಈರಣ್ಣ ಟಿ. ತಿಳಿಸಿದರು.

ಉಪಾಧ್ಯಕ್ಷ ಕಿಟ್ಟದಕುಪ್ಪೆ ನಾಗರಾಜ್ ಮಾತನಾಡಿ ಹಿರಿಯ ರಂಗಭೂಮಿ ಕಲಾವಿದ ದಿವಂಗತ ಎನ್. ಜಗನ್ನಾಥ್ ರವರ ವೇದಿಕೆ ವತಿಯಿಂದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ತಾಲೂಕಿನ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ತಿಳಿಸಿದರು.

ಸಚಿನ್ ಟಿ ಜಿ ಮಾತನಾಡಿ ಛಲವಾದಿ ಸಮುದಾಯದ ಯುವಕರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಇರುಕಸಂದ್ರ ಮಂಜುನಾಥ್, ಯುವ ಘಟಕದ ಗೌರವಾಧ್ಯಕ್ಷ ಮಂಜುನಾಥ್, ಯುವ ಘಟಕದ ಅಧ್ಯಕ್ಷ ಮಧು ಎಚ್ ಕೆ, ಗಿರೀಶ್ ತಿಪ್ಪೂರ್, ಭರತ್ ಕಿಟ್ಟದ ಕುಪ್ಪೆ, ಯುವ ಘಟಕ ಸಹ ಕಾರ್ಯದರ್ಶಿ ಸೃಜನ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಮುನಿರಾಜು, ಸದಸ್ಯರಾದ ಚಂದ್ರಪ್ಪ,ಯತೀಶ್, ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...