Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ 03 ರಂದು ಚಿತ್ರದುರ್ಗ ರೆಡ್ಡಿ ಜನಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

---Advertisement---

ಸುದ್ದಿಒನ್, ಚಿತ್ರದುರ್ಗ: ಆಗಸ್ಟ್.01 : ಚಿತ್ರದುರ್ಗ ರೆಡ್ಡಿ ಜನಸಂಘದ ವತಿಯಿಂದ ಆಗಸ್ಟ್ 3 ನೇ ತಾರೀಖಿನ  ಶನಿವಾರ ಮಧ್ಯಾಹ್ನ 12:00 ಗಂಟೆಗೆ ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : 2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಶೇ 85% ಕ್ಕಿಂತ ಮೇಲ್ಪಟ್ಟ ಅಂಕಗಳನ್ನು ಪಡೆದ ಸಮುದಾಯದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.

ಅಭಿನಂದನಾ ಕಾರ್ಯಕ್ರಮ : ದೇಶ ಸೇವೆಯ ಕರ್ತವ್ಯದಲ್ಲಿ ತೊಡಗಿಸಿಕೊಂಡು ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ಸೈನಿಕರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು

ದಿನಾಂಕ : 01-04-2023 ರಿಂದ 31-07-2024 ರವರೆಗೆ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತರಾದ ಮತ್ತು ರಾಷ್ಟ್ರಮಟ್ಟದ ವಿಶೇಷ ಪ್ರಶಸ್ತಿಗೆ ಭಾಜನರಾದ ಸಮುದಾಯದ ಅಧಿಕಾರಿಗಳು ಮತ್ತು ನೌಕರರಿಗೆ ಅಭಿನಂದನಾ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆಡ್ಡಿ ಜನಸಂಘದ ಅಧ್ಯಕ್ಷರೂ ಹಾಗೂ ಮಾಜಿ ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ ವಹಿಸುವರು.

ಈ ಕಾರ್ಯಕ್ರಮದಲ್ಲಿ ರೆಡ್ಡಿ ಜನಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಸಮುದಾಯದ ಮುಖಂಡರು, ವಿದ್ಯಾರ್ಥಿಗಳ ಪೋಷಕರು, ಮಾಜಿ ಸೈನಿಕರ ಮತು ನೌಕರರ ಕುಟುಂಬವರ್ಗದವರು ಭಾಗವಹಿಸಲಿದ್ದಾರೆ‌ ಎಂದು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...