Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎದೆ ಎಷ್ಟೇ ಇಂಚಿನದ್ದಾದರೂ ಜನಶಕ್ತಿ ಎದುರು ಮಣಿಯಲೇಬೇಕಲ್ಲ : ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ಭಾರೀ ವಿರೋಧಕ್ಕೆ ಕಾರಣವಾಗಿದ್ದ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಕಡೆಗೂ ಹಿಂಪಡೆದಿದೆ. ರೈತರ ಹೋರಾಟಕ್ಕೆ ಫಲ ಸಿಕ್ಕಿದೆ. ಈ ಜಯವನ್ನ ಇಡೀ ದೇಶ ಸಂಭ್ರಮಿಸುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ.

ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ @BJP4India ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು.

ಕೃಷಿ‌ ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ @BJP4India ಸರ್ಕಾರ ತಲಾ 25 ಲಕ್ಷ ರೂಪಾಯಿ‌ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ.

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ,
ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ.

ಕೃಷಿ ಕಾಯ್ದೆ‌ಯಷ್ಟೇ ಅಲ್ಲ, ಕೇಂದ್ರ @BJP4India ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ.

ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ‌‌ ಸ್ಪೂರ್ತಿ ಕೇಂದ್ರ @BJP4India ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!