ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀ ಬಗ್ಗೆ ಕೊಟ್ಟಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಎಲ್ಲೆಡೆ ಆಕ್ರೋಶ ಭುಗಿಲೆದ್ದಿತ್ತು. ಸೋಷಿಯಲ್ ಮೀಡಿಯಾದಲ್ಲೂ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇನ್ನು ವಿವಾದ ತಣ್ಣಗಾಗಿಲ್ಲ.
ಹಂಸಲೇಖ ಅವರು ಈ ವಿಚಾರಕ್ಕೆ ಈಗಾಗಲೇ ಕ್ಷಮೆಯನ್ನು ಕೇಳಿದ್ದಾರೆ. ಆದ್ರೆ ಅಖಿಲ ಭಾರತ ಬ್ರಾಹ್ಮಣ ಮಹಾ ಸಭಾದ ವಿಪ್ರ ಯುವ ವೇದಿಕೆಯಿಂದ ನಗರ ಪೊಲೀಸ್ ಆಯುಕ್ತರಿಗೆ ಹಂಸಲೇಖ ವಿರುದ್ಧ ದೂರು ಸಲ್ಲಿಕೆಯಾಗಿತ್ತು. ಹೀಗಾಗಿ ನಗರ ಪೊಲೀಸ್ ಆಯುಕ್ತರು ಆ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ಎರಡನೇ ಬಾರಿ ನೋಟೀಸ್ ನೀಡಿದರು ಹಂಸಲೇಖ ಇನ್ನು ವಿಚಾರಣೆಗೆ ಹಾಜರಾಗಿಲ್ಲ.
ಇನ್ನು ಪೇಜಾವರ ಶ್ರೀಗಳ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿದ್ದು ತಪ್ಪು. ಅದಕ್ಕಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪೇಜಾವರ ಶ್ರೀಗಳ ಬೃಂದಾವನದ ಮುಂದೆ ಬಂದು ಹಂಸಲೇಖ ಬಹಿರಂಗವಾಗಿ ಕ್ಷಮೆ ಕೇಳಬೇಕು. ನಾಲ್ಕು ಗೋಡೆ ಮಧ್ಯೆ ಕ್ಷಮೆ ಕೇಳಿರುವುದನ್ನು ಒಪ್ಪುವುದಿಲ್ಲ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಲಿದ್ದೇವೆ ಎಂದು ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಕೃಷ್ಣ ಹೇಳಿದ್ದರು.