ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಮೂಡಾ ಹಗರಣ ಹಾಗೂ ವಾಲ್ಮೀಕಿ ಹಗರಣ ಸಾಕಷ್ಟು ಸದ್ದು ಮಾಡ್ತಾ ಇದೆ. ಇದರ ನಡುವೆ ಯೂನಿಯನ್ ಬ್ಯಾಂಕ್ ಹಗರಣ ಸಂಬಂಧ ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ನಾಯಕ ಎಲ್.ಆರ್.ಶಿವರಾಮೇಗೌಡ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ.
ಯೂನಿಯನ್ ಬ್ಯಾಂಕ್ ಗೆ 20 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಶಿವರಾಮೇಗೌಡರು ಬಂಧನದ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ ಕೋರ್ಟ್ ಗೆ ಇಂದು ನಿರೀಕಗಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಸಿಬಿಐ ಪರ ಅಭಿಯೋಜಕರು ಕಾಲಾವಕಾಶ ಕೋರಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಸೂಚಿಸಿದ ಕೋರ್ಟ್ ವಿಚಾರಣೆಯನ್ನು ಆಗಸ್ಟ್ 7 ಕ್ಕೆ ಮುಂದೂಡಿದೆ. ಜಮೀನು ಮಾಲೀಕರೊಂದಿಗೆ ಸೇರಿ ಬ್ಯಾಂಕ್ ಗಳಿಂದ 32 ಕೋಟಿ ರೂಪಾಯಿ ಪಡೆದುಕೊಳ್ಳಲಾಗಿದೆ. ಶಾಲೆಯ ಬಾಡಿಗೆ ಹಣವನ್ನು ಬ್ಯಾಂಕ್ ಗೆ ನೀಡುವುದಾಗಿ ಒಡಂಬಡಿಕೆ ಮಾಡಲಾಗಿದೆ.
ಇನ್ನು ಎಲ್.ಆರ್.ಶಿವರಾಮೇಗೌಡ ರಾಯಲ್ ಕಾನ್ಕಾರ್ಡ್ ಸಂಸ್ಥೆಯ ಟ್ರಸ್ಟಿ ಆಗಿದ್ದು, ವರ್ತೂರಿನ ಅಂಬಲೀಪುರದ ಜಮೀನಿನ ಮೇಲೆ ಮಾಲೀಕರು ಸಾಲ ಪಡೆದಿದ್ದಾರೆ. ಒಪ್ಪಂದದಂತೆ ಸಾಲ ತೀರಿಸದೇ ಇದ್ದಾಗ ವಂಚನೆ ಆರೋಪದಡಿ ಸಿಬಿಐ ಕೇಸ್ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಹಗರಣ ಸಂಬಂಧ ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ನಾಯಕ ಎಲ್.ಆರ್.ಶಿವರಾಮೇಗೌಡ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಈಗಾಗಲೇ ಶಿವರಾಮೇಗೌಡ ಅವರು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ವಂಚನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದಾರೆ. ಈಗ ಯೂನಿಯನ್ ಬ್ಯಾಂಕ್ ಹಗರಣದಲ್ಲೂ ಅರ್ಜಿ ಹಾಕಿದ್ದು, ಜಾಮೀನು ಅರ್ಜಿಯ ವಿಚಾರಣೆಯ ಬಳಿಕ ತಿಳಿಯಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










