Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ದಿ ಮರ್ಚಂಟ್ಸ್ ಸೌಹಾರ್ದ ಸಹಕಾರಿ ಬ್ಯಾಂಕ್ ನ 5 ನೇ ಎಟಿಎಂ ಕೇಂದ್ರದ ಉದ್ಘಾಟನೆ : ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುವುದೇ ನಮ್ಮ ಆದ್ಯತೆ : ಲಕ್ಷ್ಮೀಕಾಂತ ರೆಡ್ಡಿ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 06 : ನಗರದ ಪ್ರತಿಷ್ಠಿತ ದಿ ಮರ್ಚಂಟ್ಸ್ ಸೌಹಾರ್ದ ಸಹಕಾರಿ ಬ್ಯಾಂಕ್ ನ ಜೆಸಿಆರ್ ಬಡಾವಣೆಯ ಶಾಖಾ ಕಚೇರಿಯಲ್ಲಿ 5 ನೇ ಎಟಿಎಂ ಕೇಂದ್ರವನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ. ನಂಜನಗೌಡ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸಂಯುಕ್ತ ಸಹಕಾರಿಯ ಉಪಾಧ್ಯಕ್ಷರಾದ ಎ.ಆರ್ ಪ್ರಸನ್ನಕುಮಾರ್ ಹಾಗೂ ನಿರ್ದೇಶಕರಾದ ಬಿ.ಹೆಚ್ ಕೃಷ್ಣಾರೆಡ್ಡಿ ರವರು ಭಾಗವಹಿಸಿದ್ದರು.

ಈ ವೇಳೆ ದಿ ಮರ್ಚಂಟ್ಸ್ ಸೌಹಾರ್ದ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರು ಹಾಗೂ ಸಂಯುಕ್ತ ಸಹಕಾರಿಯ ನಿಕಟಪೂರ್ವ ನಿರ್ದೇಶಕರಾದ ಎಸ್. ಆರ್. ಲಕ್ಷ್ಮೀಕಾಂತ ರೆಡ್ಡಿ ರವರು ಮಾತನಾಡಿ “ನಮ್ಮ ಗ್ರಾಹಕರಿಗೆ ಅತ್ಯುತ್ತಮ ಹಾಗೂ ಹೆಚ್ಚು ಸೇವೆಗಳನ್ನು ನೀಡುವುದೇ ನಮ್ಮ ಸಹಕಾರಿಯ ಮುಖ್ಯ ಉದ್ದೇಶ ಎಂದು ತಿಳಿಸಿದರು.

ಇಂದು ನಮ್ಮ ಸಹಕಾರಿ ಬ್ಯಾಂಕಿನ 5 ನೇ ಎಟಿಎಂಗೆ ಚಾಲನೆ ನೀಡಲಾಗಿದೆ. ಅತಿ ಹೆಚ್ಚು ಹಾಗೂ ಅತ್ಯುತ್ತಮ ಸೇವೆಗಳನ್ನು ನಮ್ಮ ಗ್ರಾಹಕರುಗಳಿಗೆ ನೀಡುವ ನಿಟ್ಟಿನಲ್ಲಿ ನಾವು ಕಾರ್ಯತತ್ಪರರಾಗಿದ್ದೇವೆ. ಈ ಮೂಲಕ ನಾವು ನಮ್ಮ ಶಾಖೆಯ 5 ನೇಎಟಿಎಂ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಈ ಮೂಲಕ ನಾವು ಗ್ರಾಹಕ ಸ್ನೇಹಿ ವಾತಾವರಣವನ್ನು ನೀಡುತ್ತಿದ್ದೇವೆ. ತಂತ್ರಜ್ಞಾನ ಅಳವಡಿಸಿಕೊಳ್ಳುವುದರಲ್ಲಿ ನಾವುಗಳ ಮುಂಚೂಣಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಹಕ ಸ್ನೇಹೀ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದಾಗಿ ತಿಳಿಸಿದರು.

ಕಳೆದ 17 ವರ್ಷಗಳಿಂದ ನಾವು ನೀಡುತ್ತಿರುವ ಸೇವೆಯಿಂದ ಬ್ಯಾಂಕ್‍ಗಳ ಇತಿಹಾಸದಲ್ಲಿಯೇ ಹೊಸ ಮೈಲಿಗಲ್ಲು ಸಾಧಿಸಲಾಗಿದೆ. ಸಹಕಾರಿ ರಂಗದಲ್ಲಿ ಪ್ರಥಮ ಸ್ಥಾನದಲ್ಲಿ ಇದ್ದೇವೆ. ಎಲ್ಲದರಲ್ಲೂ ಸಹಾ ನಮ್ಮ ಬ್ಯಾಂಕ್ ಪ್ರಥಮ ಶ್ರೇಣಿಯಲ್ಲಿದೆ ಎಂದರು.

ನಮ್ಮ ಸಹಕಾರಿ ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ. ಇದಕ್ಕೆ ಬ್ಯಾಂಕಿನ ಎಲ್ಲಾ ಸಿಬ್ಬಂದಿ ಮತ್ತು ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರ ನಿಸ್ವಾರ್ಥ ಸೇವೆ ಕಾರಣವಾಗಿದೆ. ಮುಂಬರುವ ದಿನಗಳಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಬ್ಯಾಂಕನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯಲು ಶ್ರಮಿಸುತ್ತೇವೆ ಎಂದು ಲಕ್ಷ್ಮೀಕಾಂತ ರೆಡ್ಡಿ ಯವರು ತಿಳಿಸಿದರು.

ಈ ಸಂದರ್ಭದಲ್ಲಿ ಮರ್ಚಂಟ್ಸ್ ಸೌಹಾರ್ದ ಸಹಕಾರಿ ಬ್ಯಾಂಕ್ ನ ನಿರ್ದೇಶಕರು ಹಾಗೂ ಜಿಲ್ಲಾ ನಿರ್ದೇಶಕರಾದ ರಘುರಾಮರೆಡ್ಡಿ,  ಚಿತ್ರದುರ್ಗ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ  ಡಿ.ಆರ್ ತಿಪ್ಪೇಸ್ವಾಮಿ, ಮರ್ಚಂಟ್ಸ್ ಬ್ಯಾಂಕ್ ನ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಬ್ಯಾಂಕ್ ನ ಮುಖ್ಯಕಾರ್ಯನಿರ್ವಾಹಕರಾದ ಕೆ.ಆರ್ ಮಲ್ಲಿಕಾರ್ಜುನ ರವರು ಸೇರಿದಂತೆ ಬ್ಯಾಂಕಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment