Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹರ್ ಘರ್ ತಿರಂಗಾ ಬೈಕ್ ರ‌್ಯಾಲಿ : ಎಡಿಸಿ ಬಿ.ಟಿ.ಕುಮಾರಸ್ವಾಮಿ ಹಸಿರು ನಿಶಾನೆ

Facebook
Twitter
Telegram
WhatsApp

 

ಚಿತ್ರದುರ್ಗ. ಆಗಸ್ಟ್.13:  78ನೇ ಭಾರತ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ, ನಗರಸಭೆ ವತಿಯಿಂದ “ಹರ್ ಘರ್ ತಿರಂಗಾ” ಅಭಿಯಾನದಡಿ ಚಿತ್ರದುರ್ಗ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು.

ಹರ್ ಘರ್ ತಿರಂಗಾ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಲ್ಲಿ ರಾಷ್ಟ್ರಧ್ವಜದೊಂದಿಗೆ ಬೈಕ್ ರ್ಯಾಲಿಗೆ ಚಾಲನೆ ದೊರೆಯಿತು.
ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜನರ ಹೃದಯದಲ್ಲಿ ದೇಶಭಕ್ತಿಯ ಭಾವನೆ ಪ್ರೇರೇಪಿಸುವುದು, ಐಕ್ಯತೆ, ಭಾವೈಕ್ಯತೆ ಮತ್ತು ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಹರ್ ಘರ್ ತಿರಂಗಾ ಬೈಕ್ ರ್ಯಾಲಿ ಕಾರ್ಯಕ್ರಮ ಅಯೋಜಿಸಿದ್ದು, ಪ್ರತಿಯೊಬ್ಬರಲ್ಲಿಯೂ ಭಾರತ ಸ್ವಾತಂತ್ರ್ಯದ ಹಣತೆಯ  ದೀಪ ಹಚ್ಚುವಂತಹ ಕಾರ್ಯ ಆಗಬೇಕಿದೆ ಎಂದು ಹೇಳಿದರು.
ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಮಾತನಾಡಿ, ಭಾರತ ಸ್ವಾತಂತ್ರೋತ್ಸವದ ಅಂಗವಾಗಿ “ಹರ್ ಘರ್ ತಿರಂಗಾ”  ಅಭಿಯಾನವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ, ದೇಶಭಕ್ತಿ ಗೀತೆಗಳ ಗಾಯನ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದ್ದು, ಆ.13 ರಿಂದ 15 ರವರೆಗೆ ಮೂರು ದಿನಗಳ ಕಾಲ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು ಎಂದರು.

ಚಿತ್ರದುರ್ಗ ನಗರದ ತರಾಸು ರಂಗಮಂದಿರದ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿ, ಅಂಚೆ ಕಚೇರಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿಯೂ ರಾಷ್ಟ್ರಧ್ವಜ ಲಭ್ಯವಿದ್ದು, ಪ್ರತಿ ಧ್ವಜಕ್ಕೆ ರೂ.26 ದರ ನಿಗದಿಪಡಿಸಲಾಗಿದೆ ಎಂದು ತಿಳಿಸಿದ ಅವರು, ಹರ್ ಘರ್ ತಿರಂಗಾ ಅಭಿಯಾನದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಿಂದ ಆರಂಭವಾದ ಹರ್ ಘರ್ ತಿರಂಗಾ ಬೈಕ್ ರ್ಯಾಲಿಯು ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿವೃತ್ತ, ಎಸ್‍ಬಿಐ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಅಂಬೇಡ್ಕರ್ ವೃತ್ತ, ಮದಕರಿ ವೃತ್ತದ ಮೂಲಕ ಚಳ್ಳಕೆರೆ ಗೇಟ್ ತಲುಪಿ ನಂತರ ಪುನಃ ನಗರಸಭೆಗೆ ಆಗಮಿಸಿ ರ್ಯಾಲಿ ಕೊನೆಗೊಂಡಿತು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ನೆಲವಿಗಿ, ನಗರಸಭೆ ಸದಸ್ಯರಾದ ಸುರೇಶ್, ಶಶಿಧರ್, ನಗರಸಭೆ ವ್ಯವಸ್ಥಾಪಕಿ ಮಂಜುಳಾ, ನೌಕರರ ಸಂಘದ ಅಧ್ಯಕ್ಷೆ ರೇಣುಕಾ, ಗುತ್ತಿಗೆದಾರ ಸಂಘದ ಅಧ್ಯಕ್ಷ ಸಿದ್ದಪ್ಪ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕ್ರೀಡಾಪಟುಗಳು, ಸಾರ್ವಜನಿಕರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!