Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ : ಮಾಜಿ ಶಾಸಕರ ಮನೆ ಮೇಲೆ ಹಾರಿದ ಭಾವುಟ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆ.14 : ನಮ್ಮ ದೇಶದಲ್ಲಿರುವ ವಿವಿಧ ಜಾತಿಗಳು, ಕಲೆ, ಸಂಸ್ಕೃತಿ, ಭಾಷೆ ಇತ್ಯಾದಿ ವಿಷಯಗಳನ್ನು ಒಂದೇ ವೇದಿಕೆಯಲ್ಲಿ ರಾಷ್ಟ್ರಧ್ವಜದ ಮೂಲಕ ಕಾಣಲು ಸಾಧ್ಯವಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.

ಚಿತ್ರದುರ್ಗ ನಗರದ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿಯವರ ನಿವಾಸ ಮೇಲೆ ‘ಹರ್ ಘರ್ ತಿರಂಗಾ ಅಭಿಯಾನಯಡಿಯಲ್ಲಿ ಭಾವುಟವನ್ನು ಹಾರಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಬೆಳೆಯಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಬಲಿದಾನ ಮಾಡಿರುವ ಹುತಾತ್ಮರನ್ನು ನೆನೆಯಬೇಕು ಎಂಬ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಮನೆ ಮೇಲೂ ಧ್ವಜ ಹಾರಿಸಿ ದೇಶಪ್ರೇಮ ಮೆರೆಯಿರಿ ಸ್ವಾತಂತ್ರ್ಯ ದಿನಾಚರಣೆ ವೇಳೆ ರಾಷ್ಟ್ರಧ್ವಜ ಹಾರಿಸಲು ಸೂಚನೆ ನೀಡಿದ್ದಾರೆ.

ಭಾರತ ದೇಶವನ್ನು ಸ್ವಾತಂತ್ರ್ಯಗೊಳಿಸಲು ತಮ್ಮ ಪ್ರಾಣ ಪಣಕ್ಕಿಟ್ಟು ಹುತಾತ್ಮರಾದ ಸೈನಿಕರಿಗೆ ಗೌರವ ಸಮರ್ಪಣೆ ಮಾಡುವ ಸಲುವಾಗಿ ಎಲ್ಲಾ ಮನೆಗಳ ಮೇಲೆ ಆಗಸ್ಟ್ 15 ರಂದು ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಾಚರಣೆ ಮಾಡಬೇಕು ಎಂದು ಸಾರ್ವಜನಿಕರಿಗೆ ಕರೆ ನೀಡಿ 78ನೇ ಭಾರತ ಸ್ವಾತಂತ್ರೋತ್ಸವದ ಅಂಗವಾಗಿ ಎಲ್ಲಾ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರ ಪ್ರೇಮ ಮೆರೆಯಲು ಹರ್‍ಫರ್‍ತಿರಂಗಾ ಅಭಿಯಾನವನ್ನು ಪ್ರತಿಯೊಬ್ಬ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳಬೇಕು ಆ.15ರಂದು ತಳಿರು ತೋರಣಗಳಿಂದ ಸುಸಜ್ಜಿತಗೊಳಿಸುವ ಮೂಲಕ ಹಬ್ಬದ ವಾತಾವರಣ ಸೃಷ್ಟಿಸಬೇಕು ಹಾಗೂ ಬಟ್ಟೆಯಿಂದ ಅಥವಾ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಲಾದ ಬಾವುಟಗಳನ್ನು ಮಾತ್ರ ಹಾರಿಸಲು ಮನವಿ ಮಾಡಿದರು.

ಮಾಜಿ ಶಾಸಕರಾದ ಜಿ ಹೆಚ್‍. ತಿಪ್ಪಾರೆಡ್ಡಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ ಬಂದು 78 ವರ್ಷಗಳಾಗಿದೆ. ನಮ್ಮ ಜನತೆ ಬ್ರಿಟಿಷರನ್ನು ತೊಲಗಿಸಿ ದೇಶಕ್ಕೆ ಸ್ವಾತಂತ್ರ್ಯವನ್ನು ತರುವಲ್ಲಿ ಅನೇಕರು ತಮ್ಮ ಪ್ರಾಣವನ್ನು ನೀಡಿ ನಮಗೆ ಸ್ವಾತಂತ್ರ ಭಾರತವನ್ನು ನೀಡಿದ್ದಾರೆ. ಪ್ರಧಾನ ಮಂತ್ರಿಯವರು ಕರೆಯನ್ನು ನೀಡಿದ್ದಾರೆ. ಕನ್ಯಾಕುಮಾರಿಯಿಂದ ಹಿಡಿದು ಹಿಮಾಲಯದವರೆಗೂ ಪ್ರತಿಯೊಬ್ಬರ ಮನೆಯ ಮೇಲೆ ಸರ್ಕಾರಿ ಕಚೇರಿಯ ಮೇಲೆ ದೇಶದ 140 ಕೋಟಿ ಜನರ ಮನೆಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವುದರ ಮೂಲಕ ದೇಶ ಭಕ್ತಿಯನ್ನು ತೋರಿಸುವ ಕಾರ್ಯವನ್ನು ಮಾಡಬೇಕಿದೆ. ಇದ್ದಲ್ಲದೆ ಖಾಸಗಿಯಾಗಿಯೂ ಸಹಾ ಮನೆಯ ಮೇಲೆ ಧ್ವಜವನ್ನು ಹಾರಿಸುವ ಕಾರ್ಯವನ್ನು ಮಾಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜನ್, ಮುಖಂಡರಾದ ಡಾ.ಸಿದ್ಧಾರ್ಥ, ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್,ಶಿವಣ್ಣಚಾರ್, ಶೇಷಣ್ಣರೆಡ್ಡಿ, ನಾಗರಾಜ್, ನಗರಸಭಾ ಸದಸ್ಯರಾದ ಹರೀಶ್ ಬಿ.ಸುರೇಶ್ ಮಾಜಿ ಸದಸ್ಯರಾದ ರವಿಶಂಕರ್, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶೈಲಜಾರೆಡ್ಡಿ, ಮಹಿಳಾ ಮಣಿಗಳಾದ ಕಾಂಚನ, ರೇಖಾ, ಭಾರತಿ, ವೀಣಾ, ಶಾಂತಮ್ಮ, ಪವಿತ್ರಾ, ರಾಗಿಣಿ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!