Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಕುರಿಗಳ ಮೇಲೆ ಬೀದಿನಾಯಿ ದಾಳಿ : 5 ಕುರಿಗಳು ಸಾವು

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಚಳ್ಳಕೆರೆ, ಆಗಸ್ಟ್.16 : ಕುರಿ ಹಟ್ಟಿಗೆ ನುಗ್ಗಿದ ಬೀದಿ ನಾಯಿಗಳು ಕುರಿ ಹಾಗು ಮರಿಗಳ ಮೇಲೆ ದಾಳಿ ಮಾಡಿದ್ದು 5 ಕುರಿಗಳು ಸಾವನ್ನಪ್ಪಿರುವ ಘಟನೆ  ತಾಲೂಕಿನ ಹಾಲಗೊಂಡನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಹಾಲಗೊಂಡನಹಳ್ಳಿ ಗ್ರಾಮದ ಕುರಿಗಾಯಿ ತಿಪ್ಪೇಸ್ವಾಮಿಗೆ ಸೇರಿದ ಕುರಿಗಳು ರಾತ್ರಿ ಕುರಿಹಟ್ಟಿಯಲ್ಲಿ ಮಲಗಿದ್ದ ವೇಳೆ, ಏಕಾಏಕಿ ಬೀದಿನಾಯಿಗಳು ದಾಳಿ ನಡೆಸಿದೆ.

ರೈತ ತಿಪ್ಪೇಸ್ವಾಮಿ ಕುಟುಂಬ ನಿರ್ವಹಣೆಗಾಗಿ ಮಾರುಕಟ್ಟೆಯಿಂದ 5 ಸಾವಿರ ರೂ. ನಂತೆ 10 ಕುರಿ ಮರಿಗಳನ್ನು ಖರೀದಿಸಿ ತಂದು ಮನೆಯ ಪಕ್ಕದಲ್ಲೇ ಒಂದು ಚಿಕ್ಕ ಗುಡಿಸಲು ನಿರ್ಮಿಸಿ, ಸುತ್ತಲೂ ಬಲೆಯನ್ನು ಹಾಕಿ ಕುರಿಗಳನ್ನು ಸಾಕುತ್ತಿದ್ದ. ಗುರುವಾರ ರಾತ್ರಿ ಏಕಾಏಕಿ ಕುರಿಗಳ ಮೇಲೆ  ಬೀದಿ ದಾಳಿ ಮಾಡಿ 5 ಕುರಿ ಮರಿಗಳನ್ನು ಕೊಂದು ಹಾಕಿದ್ದು, ಉಳಿದ 5 ಮರಿಗಳಿಗೆ ಗಂಭೀರ ಗಾಯಗಳಾಗಿವೆ.

ಈ ಘಟನೆಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕುರಿ ಸಾಕಾಣಿಕೆದಾರರು ಆತಂಕಕ್ಕೊಳಗಾಗಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ದಾಳಿಗೆ ತುತ್ತಾದ ಕುರಿಗಳಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಗ್ರಾಮಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ : ವಕ್ಫ್-ಮಣಿಪುರ ಹಿಂಸಾಚಾರ ಸೇರಿದಂತೆ ಹಲವು ವಿಚಾರಗಳ ಚರ್ಚೆ…!

  ಸುದ್ದಿಒನ್ | ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ (ಸೋಮವಾರ, ನವೆಂಬರ್ 25) ಆರಂಭವಾಗಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಮರಳಿರುವುದು ಮತ್ತು ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷದ ಗೆಲುವು

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ : ಈ ರಾಶಿಯವರ ಕುಟುಂಬದಲ್ಲಿ ಒಬ್ಬರಿಂದ ಅಶಾಂತಿಯ ವಾತಾವರಣ: ಸೋಮವಾರ ರಾಶಿ ಭವಿಷ್ಯ -ನವೆಂಬರ್-25,2024 ಸೂರ್ಯೋದಯ: 06:30, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

error: Content is protected !!