Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ 26 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ : ಮುಖಂಡರ ಪೂರ್ವಭಾವಿ ಸಭೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ಆಗಸ್ಟ್.21 : ಹೊಳಲ್ಕೆರೆ ರಸ್ತೆಯಲ್ಲಿರುವ ಕೃಷ್ಣಯಾದವಾನಂದ ಮಠದ ಸಮೀಪವಿರುವ ಶ್ರೀಕೃಷ್ಣ ವೃತ್ತದಲ್ಲಿ ಆ.26 ರಂದು ಶ್ರೀಕೃಷ್ಣ ಜನ್ಮಾಷ್ಠಮಿ ಆಚರಿಸುವ ಕುರಿತು ತಾಲ್ಲೂಕು ಗೊಲ್ಲ ಸಮಾಜದಿಂದ ಇತ್ತೀಚೆಗೆ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.

ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ಅಧ್ಯಕ್ಷ ಈರಜ್ಜನಹಟ್ಟಿ ಕೆ.ಕದುರಪ್ಪ ಮಾತನಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.25 ರಂದು ಶ್ರೀಕೃಷ್ಣ ವೃತ್ತದಿಂದ ಬೈಕ್‍ರ್ಯಾಲಿ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಆ.26 ರಂದು ಬೆಳಗಿನಿಂದಲೇ ವಿವಿಧ ಪೂಜಾ ಕಾರ್ಯಕ್ರಮಗಳ ನಡೆಯಲಿದ್ದು, ಸಮಸ್ತ ಗೊಲ್ಲ ಜನಾಂಗದವರು ಹಾಗೂ ಸಹೋದರ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಗೊಲ್ಲ ಸಮಾಜದ ಮುಖಂಡ ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ ಜನಾಂಗದ ಅನೇಕ ಮುಖಂಡರುಗಳು ಶಾಸಕರು, ಸಂಸದರು ಹಾಗೂ ಜಿಲ್ಲಾಧಿಕಾರಿ ಇವರುಗಳು ಶ್ರೀಕೃಷ್ಣ ಜನ್ಮಾಷ್ಠಮಿಯಲ್ಲಿ ಭಾಗವಹಿಸಲಿದ್ದಾರೆ. ಇದು ಕೇವಲ ಗೊಲ್ಲ ಜನಾಂಗಕ್ಕೆ ಮಾತ್ರ ಸೀಮಿತವಲ್ಲ. ಎಲ್ಲಾ ಜಾತಿ ಧರ್ಮದವರು ಪಾಲ್ಗೊಳ್ಳಬೇಕೆಂದು ವಿನಂತಿಸಿದರು.

ಜಿಲ್ಲಾ ಗೊಲ್ಲರ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ್, ಗ್ಯಾರೆಂಟಿ ಅನುಷ್ಠಾನ ಸಮಿತಿಗಳ ಅಧ್ಯಕ್ಷ ಆರ್.ಶಿವಣ್ಣ, ನಾಗರಾಜ್, ಗ್ರಾಮ ಪಂಚಾಯಿತಿ ಸದಸ್ಯ ಟಿ.ಜಗದೀಶ್, ಗರಡಿ ತಿಮ್ಮಣ್ಣ, ನಗರಸಭೆ ಮಾಜಿ ಸದಸ್ಯ ಡಿ.ಸುರೇಶ್, ಸಂಪತ್‍ಕುಮಾರ್, ಗೌಡಪ್ಪ, ನಿಂಗೇಶ್, ಮಹಾಂತೇಶ್, ಅವಳೇಶ್, ಅವಳಿಹಟ್ಟಿ ಬಂಗಿ ಜಗ್ಗಣ್ಣ, ಗೋವಿಂದಪ್ಪ, ಜಿ.ಪಿ.ಕೆ.ಜನಾರ್ಧನ್, ಮಹಲಿಂಗಪ್ಪ, ವಿರುಪಾಕ್ಷಪ್ಪ ಯಾದವ್, ಹರೀಶ್, ಮಂಜುನಾಥ, ಲೋಕೇಶ್, ಮಂಜುನಾಥ, ತಿಮ್ಮರಾಯಪ್ಪ, ಮೈಲಾರಪ್ಪ, ಸಂತೋಷ್‍ಕುಮಾರ್, ಕೃಷ್ಣ ವೃತ್ತ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಗೊಲ್ಲ ಸಮಾಜದ ಅನೇಕ ಮುಖಂಡರುಗಳು ಪೂರ್ವಭಾವಿ ಸಭೆಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...