ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22: ಲಾರಿ ಚಾಲಕನನ್ನು ಬೆದರಿಸಿ ಹಣವನ್ನು ಫೋನ್ ಪೇ ಮೂಲಕ ದೋಚಿ ಪರಾರಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಇಂದು (ಗುರುವಾರ) ಬೆಳಿಗ್ಗೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಮಲ್ಲಾಪುರದ ಬಳಿ ತಮಿಳುನಾಡು ಮೂಲದ ಲಾರಿ ಚಾಲಕ ಲೋಗನಾಥನ್ ಮೂತ್ರವಿಸರ್ಜನೆಗೆಂದು ಲಾರಿ ನಿಲ್ಲಿಸಿದ್ದಾರೆ. ಈ ವೇಳೆ ಅಲ್ಲಿಗೆ ಐವರು ದುಷ್ಕರ್ಮಿಗಳು ಬಂದಿದ್ದು ಚಾಕು ತೋರಿಸಿ ಲಾರಿ ಚಾಲಕನನ್ನು ಬೆದರಿಸಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ.

ಲಾರಿ ಚಾಲಕನ ಬಳಿಯಿದ್ದ ಒಂದು ಸಾವಿರ ರೂಪಾಯಿಗಳನ್ನು ಕಿತ್ತುಕೊಂಡಿದ್ದಾರೆ. ನಂತರ ಆತನ ಮೊಬೈಲ್ ಕಸಿದುಕೊಂಡು ಫೋನ್ ಪೇ ಮುಖಾಂತರ 9 ಸಾವಿರ ರೂಪಾಯಿಗಳನ್ನು ವರ್ಗಾವಣೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










