Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕೊಲ್ಕತ್ತಾ ವೈದ್ಯೆ ಪ್ರಕರಣ : ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಚಿತ್ರದುರ್ಗದಲ್ಲಿ ಇನ್ನರ್‍ವೀಲ್ಹ್ ಕ್ಲಬ್ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22 :  ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಇನ್ನರ್‍ವೀಲ್ಹ್ ಕ್ಲಬ್‍ನಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರ್‍ಗೆ ಮನವಿ ಸಲ್ಲಿಸಲಾಯಿತು.

ಮದಕರಿನಾಯಕ ಸರ್ಕಲ್‍ನಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಟೈನಿ ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆಗೈದಿರುವುದು ಇಡಿ ಮನುಕುಲವೆ ನಾಚಿ ತಲೆತಗ್ಗಿಸುವಂತಾಗಿದೆ. ಈ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಮಾನವೀಯ ಕೃತ್ಯವೆಸಗಿರುವವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಇನ್ನರ್‍ವೀಲ್ಹ್ ಕ್ಲಬ್ ಅಧ್ಯಕ್ಷೆ ಪೂಜಾ ಪ್ರದೀಪ್ ಒತ್ತಾಯಿಸಿದರು.

ಇನ್ನರ್‍ವೀಲ್ಹ್ ಕ್ಲಬ್ ಕಾರ್ಯದರ್ಶಿ ನಮ್ರತಾ ದೇವರಾಜ್, ವೈಸ್ ಪ್ರೆಸಿಡೆಂಟ್ ವಿಜಯಕಿರಣ್, ಐ.ಪಿ.ಪಿ. ಮೋಕ್ಷರುದ್ರಸ್ವಾಮಿ, ಶ್ಯಾಮಲ ಶಿವಪ್ರಕಾಶ್, ಜ್ಯೋತಿಲಕ್ಷ್ಮಣ್, ಭಾಗ್ಯಮೂರ್ತಿ, ಬಿಜೆಪಿ. ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಶೈಲಜಾರೆಡ್ಡಿ ಹಾಗೂ ಕ್ಲಬ್‍ನ ಎಲ್ಲಾ ಸದಸ್ಯರು, ಚೈತನ್ಯ ಪಿ.ಯು.ಕಾಲೇಜಿನ ವಿದ್ಯಾರ್ಥಿಗಳು, ರೋಟರಿ ಹಾಗೂ ವಾಸವಿ ಸಂಸ್ಥೆಯವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...