Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕರ್ತವ್ಯಲೋಪ : ಎಫ್‌ಡಿಎ ಅಮಾನತು

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ಅಕ್ಷರ ದಾಸೋಹದ ಪ್ರಥಮ ದರ್ಜೆ ಸಹಾಯಕಿ ಅಯೇಷಾ ಸಿದ್ದಿಖಾ ಅವರನ್ನು  ಕರ್ತವ್ಯ ಲೋಪ ಎಸಗಿದ ಆಪಾದನೆ ಮೇಲೆ ಅಮಾನತುಗೊಳಿಸಿ ಚಿತ್ರದುರ್ಗ ಜಿಲ್ಲಾ ಪಂಚಾಯತಿ ಸಿಇಒ ಎಸ್.ಜೆ. ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಆದೇಶದಂತೆ ದ್ವಿ-ಲಕೋಟೆ ಟೆಂಡರ್ ಪ್ರಕ್ರಿಯೆಯಲ್ಲಿ ಪ್ರಾಧಿಕಾರದಿಂದ ತಾಂತ್ರಿಕ ಬಿಡ್ ತೆರೆಯಲು ಅನುಮತಿ ಪಡೆಯದೇ ಎರಡು ಲಕೋಟೆಗಳನ್ನು ಏಕಕಾಲದಲ್ಲಿ ತೆರೆದು ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ಮಾಡಿ ಕರ್ತವ್ಯ ಲೋಪ ಎಸಗುವ ಮೂಲಕ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ, ಕರ್ನಾಟಕ ನಾಗರಿಕ ಸೇವಾ (ನಡಾವಳಿಕೆ) ನಿಯಮಾವಳಿಗಳನ್ನು ಉಲ್ಲಂಘಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ಲಿಖಿತ ಸಮಾಜಾಯಿಷಿಯನ್ನು ಸಲ್ಲಿಸುವಂತೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿರುತ್ತದೆ. ಅದರಂತೆ ಸಮಜಾಯಿಷಿಯನ್ನು ಸಲ್ಲಿಸುತ್ತಾ ಸಮರ್ಪಕವಾಗಿ ಉತ್ತರವನ್ನು ನೀಡಿರುವುದಿಲ್ಲ. ಈ ಕಾರಣಗಳಿಂದ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯತಿ ಸಿಇಒ ಎಸ್.ಜೆ. ಸೋಮಶೇಖರ್ ಅವರು ಆದೇಶಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment