ರಾಜ್ಯದಲ್ಲಿ ಸಿದ್ದರಾಮಯ್ಯ.. ದೇಶದಲ್ಲಿ ಮೋದಿ ಅಧಿಕಾರ ಕಳೆದುಕೊಳ್ಳಲಿದ್ದಾರೆ : ಸ್ವಾಮೀಜಿ ಸ್ಪೋಟಕ ಭವಿಷ್ಯ..!

ಬೆಂಗಳೂರು : ರಾಜ್ಯದಲ್ಲಿ ಆಗಾಗ ಸಿಎಂ ಬದಲಾವಣೆಯ ಗಾಳಿ ಬೀಸುತ್ತಲೆ ಇರುತ್ತದೆ. ಆದರಂತೆ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಉಳಿದ ದಿನಗಳಲ್ಲೂ ಮುಖ್ಯಮಂತ್ರಿಯಾಗಿ ಉಳಿಯಲಿದ್ದಾರೆ ಎಂಬ ಗಟ್ಟಿ ಮಾತುಗಳು ಕೇಳಿ ಬರುತ್ತಿವೆ. ಇದರ ನಡುವೆ ಸ್ವಾಮೀಜಿಯೊಬ್ಬರು ಸಿದ್ದರಾಮಯ್ಯ ಮತ್ತು ಪ್ರಧಾನಿ ಮೋದಿ ಅವರ ಭವಿಷ್ಯವನ್ನು ನುಡಿದು ಗಮನ ಸೆಳೆದಿದ್ದಾರೆ.

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗೋನಾಲ ಗ್ರಾಮದ ಗಡೇ ದುರ್ಗಾದೇವಿ ದೇವಸ್ಥಾನದ ಅರ್ಚಕ ಮಹಾದೇವಪ್ಪ ಪೂಜಾರಿ ಸಿಎಂ ಹಾಗೂ ಪಿಎಂ ಭವಿಷ್ಯ ನುಡಿದಿದ್ದಾರೆ. ಗಡೇ ದುರ್ಗಾದೇವಿ ಅಮ್ಮ ನನ್ನ ಕನಸಿನಲ್ಲಿ ಬಂದು ಒಂಭತ್ತು ಮಂದಿ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಇಬ್ಬರಿಗೆ ಸಿಎಂ ಸ್ಥಾನ ನೀಡಲು ತಾಯಿ ಪ್ರೇರಣೆ ನೀಡಿದ್ದಾಳೆ. ನಾನು ಡಿಕೆ ಶಿವಕುಮಾರ್ ಅವರಿಗೆ ಹಾರ ಹಾಕಲು ಹೇಳಿದ್ದೆ. ಆದರೆ ತಾಯಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದಳು. ಅದರಂತೆ ಮೊದಲನೇ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ಅಲಂಕರಿಸಿದ್ದಾರೆ. ಇದೀಗ ಎರಡನೇ ಅವಧಿಗೆ ಡಿಕೆ ಶಿವಕುಮಾರ್ ಸಿಎಂ ಆಗುವ ಅವಧಿ ಬಂದಿದೆ ಎಂದಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಕೂಡ ಗಡೇ ದುರ್ಗಾದೇವಿಯ ಭಕ್ತರಾಗಿದ್ದಾರೆ.

ಅಲ್ಲದೇ ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಅಧಿಕಾರ ಕಳೆದುಕೊಂಡರೆ ದೇಶದಲ್ಲಿ ನರೇಂದ್ರ ಮೋದಿಯವರು ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಮಹದೇವಪ್ಪ ಪೂಜಾರಿ ನುಡಿದ ಭವಿಷ್ಯ ಈಗಾಗಲೇ ಹಲವು ಬಾರಿ ಸತ್ಯವಾಗಿದೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದಿದ್ದರು. ಅದರಂತೆ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *