ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ಕರ್ನಾಟಕ ರಾಜ್ಯ ರೈತ ಸಂಘ ಪುಟ್ಟಣ್ಣಯ್ಯ ಬಣದ ತಾಲ್ಲೂಕು ನೂತನ ಸಮಿತಿಯನ್ನು ಎ.ಪಿ.ಎಂ.ಸಿ. ರೈತ ಭವನದಲ್ಲಿ ಶುಕ್ರವಾರ ರಚಿಸಲಾಯಿತು.
ತಾಲ್ಲೂಕು ಅಧ್ಯಕ್ಷರಾಗಿ ಪ್ರಭು ಇಸಾಮುದ್ರ, ಗೌರವಾಧ್ಯಕ್ಷರಾಗಿ ತಿಪ್ಪೇಸ್ವಾಮಿ ಜಾನುಕೊಂಡ, ಕಾರ್ಯಾಧ್ಯಕ್ಷರಾಗಿ ಚಂದ್ರಣ್ಣ ಶಿವನಕೆರೆ, ಕೆಂಚಪ್ಪ ಕಳ್ಳಿರೊಪ್ಪ, ಪ್ರಧಾನ ಕಾರ್ಯದರ್ಶಿಗಳಾಗಿ ಕಾಂತರಾಜ ಹುಣಸೆಕಟ್ಟೆ, ಸಿದ್ದೇಶ ಜಾನುಕೊಂಡ, ಉಪಾಧ್ಯಕ್ಷರುಗಳಾಗಿ ಕರಿಯಪ್ಪ ವಡ್ಡರಸಿದ್ದವ್ವನಹಳ್ಳಿ, ಜೆ.ಎನ್.ಕೋಟೆ ಓಂಕಾರಪ್ಪ, ರಂಗೇಗೌಡ ಹುಣಸೆಕಟ್ಟೆ, ರವಿ ಕೋಗುಂಡೆ, ಕಾರ್ಯದರ್ಶಿಗಳಾಗಿ ಶಂಭುಲಿಂಗಪ್ಪ, ತಿಪ್ಪೇಸ್ವಾಮಿ, ಕರಿಬಸಪ್ಪ, ಹನುಮಂತರೆಡ್ಡಿ, ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ್‍ನಾಯ್ಕ ಖಜಾಂಚಿಯಾಗಿ ಮಂಜಣ್ಣ ಶಿವನಕೆರೆ, ಜಿಲ್ಲಾ ಸಮಿತಿಗೆ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಕುಮಾರ ಕಲ್ಲೇನಹಳ್ಳಿ, ಉಪಾಧ್ಯಕ್ಷರಾಗಿ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇವರುಗಳನ್ನು ನೇಮಕ ಮಾಡಲಾಯಿತು.
ಯುವ ರೈತ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ತಿಪ್ಪೇಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮೋಹನ, ಪ್ರಧಾನ ಕಾರ್ಯದರ್ಶಿಯಾಗಿ ಮಾರುತಿ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನ ಮಾಳಿಗೆ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಪುಟ್ಟಣ್ಣಯ್ಯ ಬಣದ ತಾಲ್ಲೂಕು ನೂತನ ಸಮಿತಿಗೆ ಪದಾಧಿಕಾರಿಗಳ ನೇಮಕ.
ಚಿತ್ರದುರ್ಗ : ರೈತರ ಪರವಾಗಿ ಇಂದಿಗೂ ನಡೆಸುತ್ತಿರುವ ಹೋರಾಟದಲ್ಲಿ ಅನೇಕ ಸಮಸ್ಯೆ, ಸವಾಲು, ಸನ್ನಿವೇಶಗಳನ್ನು ಎದುರಿಸಿದ್ದೇನೆ. ಜೈಲಿಗೂ ಸಹ ಹೋಗಿ ಬಂದಿದ್ದೇವೆಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ತಮ್ಮ ಅನುಭವವನ್ನು ಹಂಚಿಕೊಂಡರು.
ಎ.ಪಿ.ಎಂ.ಸಿ.ರೈತ ಭವನದಲ್ಲಿ ಶುಕ್ರವಾರ ನಡೆದ ತಾಲ್ಲೂಕು ನೂತನ ಸಮಿತಿ ರಚನೆಯ ನಂತರ ಮಾತನಾಡಿ ಹಿರಿಯರ ಮಾರ್ಗದರ್ಶನದಲ್ಲಿ ರೈತರ ಹಿತಕ್ಕಾಗಿ ಅನೇಕ ಹೋರಾಟಗಳನ್ನು ಮಾಡಿದ್ದೇನೆ. ಸಂಘಟನೆಯಲ್ಲಿ ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಹಾಗಾಗಿ ರೈತರು ಬೇಜವಾಬ್ದಾರಿ ತೋರದೆ ಒಬ್ಬರಿಗೊಬ್ಬರು ಸಹಕಾರ ನೀಡಿದಾಗ ಮಾತ್ರ ಸರ್ಕಾರದಿಂದ ಕೃಷಿಗೆ ಸಿಗುವ ಸೌಲತ್ತುಗಳನ್ನು ಪಡೆದುಕೊಳ್ಳಬಹುದು. ಸಂಘಟನೆಯಲ್ಲಿ ಒಡಕು ಮೂಡಿದರೆ ಸರ್ಕಾರ, ಅಧಿಕಾರಿಗಳು ಹೆದರುವುದಿಲ್ಲ.
ಹಾಗಾಗಿ ಒಗ್ಗಟ್ಟಿನಿಂದ ಇರಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಹೊರಕೇರಪ್ಪ ಮಾತನಾಡಿ ಯಾವ ಸರ್ಕಾರವಾಗಲಿ, ರಾಜಕಾರಣಿಗಳಾಗಲಿ ರೈತರ ಪರ ಧ್ವನಿ ಎತ್ತುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ರೈತರ ನೆನಪಾಗುತ್ತದೆ. ಮೂರು ರೈತ ವಿರೋಧಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವಂತೆ ದೆಹಲಿಯಲ್ಲಿ ಹದಿನೈದು ತಿಂಗಳ ಕಾಲ ಮಳೆ ಚಳಿಯನ್ನು ಲೆಕ್ಕಿಸದೆ ರೈತರು ಚಳುವಳಿ ನಡೆಸಿದರು. ಹೋರಾಟದಿಂದ ಮಾತ್ರ ಸರ್ಕಾರವನ್ನು ಮಣಿಸಲು ಸಾಧ್ಯ. ಇಲ್ಲದಿದ್ದರೆ ಸರ್ಕಾರದ ಯೋಜನೆಗಳು ಸಿಗುವುದಿಲ್ಲ. ಉತ್ತರ ಕರ್ನಾಟಕದಲ್ಲಿ ಅತಿ ವೃಷ್ಠಿಯಿಂದಾಗಿ ರೈತರ ಬೆಳೆಗಳು ಕೊಚ್ಚಿ ಹೋಗಿವೆ ಎಂದು ರೈತರ ಸಮಸ್ಯೆಗಳನ್ನು ಹೇಳಿಕೊಂಡರು.
ಜಿಲ್ಲೆಗೆ 284 ಕೋಟಿ ರೂ.ಬೆಳೆ ವಿಮೆ ಬಂದಿದೆ. ಹೆಗಲ ಮೇಲಿರುವ ಹಸಿರು ಶಾಲಿಗೆ ಹೆಚ್ಚಿನ ಜವಾಬ್ದಾರಿಯಿದೆ. ರೈತ ಸಂಘವನ್ನು ಬಲಿಷ್ಟವಾಗಿ ಬೆಳೆಸೋಣ ಎಂದು ನೂತನ ತಾಲ್ಲೂಕು ಸಮಿತಿಯ ಪದಾಧಿಕಾರಿಗಳಿಗೆ ತಿಳಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಮಾಜಿ ಅಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು ಸೇರಿದಂತೆ ಅನೇಕ ರೈತ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.