Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ : ಎಸ್.ಕೆ.ಮಲ್ಲಿಕಾರ್ಜುನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ಗಡಿಭಾಗದ ಕನ್ನಡದ ಸಮಸ್ಯೆ ಆತಂಕ ತಂದಿದೆ. ಗಡಿಪ್ರದೇಶಗಳಲ್ಲಿ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಕನ್ನಡನೆಲ, ಜಲ, ಭಾಷೆಯ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಸರ್ಕಾರವು ಹಮ್ಮಿಕೊಳ್ಳುವ ಕನ್ನಡಪರ ಯೋಜನೆಗಳಿಂದಾಗಿ ಕನ್ನಡನಾಡು ಸಮೃದ್ಧವಾಗಿ ಉಳಿಸಿಕೊಳ್ಳುವ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು.

ಹಸಿರು ನೆಮ್ಮದಿಯ ತಾಣವಾದರೆ, ಕನ್ನಡಭಾಷೆ ನಮ್ಮೆಲ್ಲರ ಉಸಿರಾಗಬೇಕು. ಕನ್ನಡ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಕನ್ನಡ ನೆಲದ ಭಾಷೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ವಿಷಯಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿ ತೋರಬೇಕು. ಅತ್ಯಂತ ಶ್ರೀಮಂತವಾಗಿರುವ ಕನ್ನಡನಾಡಿನಲ್ಲಿ ನೆಲೆಸಿರುವ ನಾವೆಲ್ಲರೂ ಧನ್ಯರು ಎಂದು ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.

ಆಗಸ್ಟ್ 24 ರಂದು ಶನಿವಾರ ಬೆಳಿಗ್ಗೆ ಒಂಭತ್ತು ಗಂಟೆಗೆ ಹಿರೇಗುಂಟನೂರು ಗ್ರಾಮದಲ್ಲಿರುವ ತರಳಬಾಳು ವಿದ್ಯಾಸಂಸ್ಥೆಯ ಶ್ರೀ ದ್ಯಾಮಲಾಂಬ ಪ್ರೌಢಶಾಲಾ ಆವರಣದಲ್ಲಿ ನಗರದ ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯವಾಕ್ಯದೊಂದಿಗೆ ನಾಡಗೀತೆ, ರಾಷ್ಟ್ರಗೀತೆ, ರೈತಗೀತೆ ಪ್ರಾಯೋಗಿಕ ಗಾಯನ ತರಬೇತಿ, ಕನ್ನಡ ಗೀತಗಾಯನ, ಕವಿಕಾವ್ಯ ಪರಿಚಯ ಹಾಗೂ ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅನ್ಯಭಾಷೆಗಳನ್ನು ವ್ಯಾವಹಾರಿಕವಾಗಿ ಅಭ್ಯಾಸ ಮಾಡುವುದು ತಪ್ಪಲ್ಲ. ಆದರೆ ಮಾತೃಭಾಷೆ ಕನ್ನಡ ಜನಜೀವನದ ಭಾಷೆಯಾಗಬೇಕು. ಉನ್ನತ ವ್ಯಾಸಂಗ ಮಾಡಿದ ನಿರುದ್ಯೋಗಿಗಳು ಸ್ವಾವಲಂಬಿಗಳಾಗಿ ಬದುಕು ನಡೆಸಬೇಕು. ಕೃಷಿ ಮತ್ತು ಕೈಗಾರಿಕೆ ಮತ್ತಿತರ ಮೂಲಕಸುಬುಗಳಲ್ಲಿ ಆಸಕ್ತಿ ತೋರಬೇಕು. ಹಿರಿಯರ ಸಾಂಪ್ರದಾಯಿಕ ಸಂಸ್ಕøತಿಗಳ ಆಚರಣೆಗಳು ಗಟ್ಟಿಯಾದ ನೆಲೆಗಟ್ಟಿನಲ್ಲಿ ಉಳಿಯಬೇಕು. ಇಂದಿನ ಮಕ್ಕಳು ಸರಳ ಜೀವನ ನಡೆಸಲು ಮುಂದಾಗುತ್ತಾರೆ. ಆರೋಗ್ಯದಲ್ಲಿ ಏರುಪೇರುಗಳು ಉಂಟಾಗುತ್ತಿವೆ. ಎಚ್ಚರಿಕೆಯ ಬದುಕು ನಡೆಸಬೇಕಿದೆ.

ಆರೋಗ್ಯಪೂರ್ಣ ಓದುಗಾರಿಕೆ, ಮಾತುಗಾರಿಕೆ ಜೀವನದ ಮಹತ್ವವನ್ನು ಮೇಳೈಸುತ್ತದೆ. ಚಿತ್ರದುರ್ಗ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಆಯ್ದ ಐವತ್ತು ಪ್ರೌಢಶಾಲೆಗಳಲ್ಲಿ ರಂಗಸೌರಭ ಕಲಾವಿದರು ಕನ್ನಡಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಸಂತಸ ತಂದಿದೆ. ಜಿಲ್ಲಾಡಳಿತವು ಸಂಘದ ಸಾಹಿತ್ಯ ಮತ್ತು ಸಾಂಸ್ಕøತಿಕ ಚಟುವಟಿಕೆಗಳನ್ನು ಗಮನಿಸಿ ಜಿಲ್ಲಾ ಮಟ್ಟದಲ್ಲಿ ನಿವೇಶನ ನೀಡಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು.

ಮುಖ್ಯಶಿಕ್ಷಕ ಟಿ.ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಕನ್ನಡಭಾಷೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು. ಸ್ಪಷ್ಟ ಓದು, ಮಾತುಗಾರಿಕೆಗೆ ಕನ್ನಡದ ಅಪಾರವಾದ ಶಬ್ದಭಂಡಾರವನ್ನು ತಮ್ಮದಾಗಿಸಿಕೊಳ್ಳಬೇಕು ಎಂದರು. ಸಹಶಿಕ್ಷಕರಾದ ಕೆ.ಹೆಚ್.ತಿಪ್ಪೇಸ್ವಾಮಿ, ಆರ್.ವಿದ್ಯಾಶ್ರೀ, ದೈಹಿಕಶಿಕ್ಷಕ ಪಿ.ಪುರುಷೋತ್ತಮ, ದ್ವಿದಸ ಎನ್.ಮರುಳಸಿದ್ದಯ್ಯ ಮುಖ್ಯಅತಿಥಿಗಳಾಗಿ ಉಪಸ್ಥಿತರಿದ್ದರು. ಕನ್ನಡಶಿಕ್ಷಕ ಎನ್.ಸುನಿಲ್ ಇತಿಹಾಸ ಸಂಶೋಧಕ, ಲೇಖಕ ಹುಲ್ಲೂರು ಶ್ರೀನಿವಾಸ ಜೋಯಿಸರ ಪರಿಚಯಾತ್ಮಕ ಲೇಖನವನ್ನು ವಾಚನ ಮಾಡಿದರು.

ಕರ್ನಾಟಕ ರಾಜ್ಯದ ಸಮಸ್ತ ವಿದ್ಯಾರ್ಥಿ/ನಿಯರಿಗೆ ಸರ್ಕಾರ ನಿಗಧಿಪಡಿಸಿದ ನಾಡಗೀತೆ, ರಾಷ್ಟ್ರಗೀತೆ, ರೈತಗೀತೆಯನ್ನು ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಪ್ರಾಯೋಗಿಕವಾಗಿ ನಿಯಮಬದ್ಧವಾಗಿ ತರಬೇತಿ ನೀಡಿದರು. ಹುಯಿಲುಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಕುವೆಂಪು ವಿರಚಿತ ಎಲ್ಲಾದರು ಇರು ಎಂತಾದರು ಇರು, ದ.ರಾ.ಬೇಂದ್ರೆಯವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ಧಯ್ಯ ಪುರಾಣಿಕ ಬರೆದ ಹೊತ್ತಿತೋ ಹೊತ್ತಿತೂ ಕನ್ನಡದ ದೀಪ, ಚನ್ನವೀರ ಕಣವಿಯವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡದ ಧ್ವನಿಮುದ್ರಿತ ಗೀತೆಗಳೊಂದಿಗೆ ಯೋಗಶಿಕ್ಷಕ ಎಂ.ಬಿ.ಮುರುಳಿ ಯೋಗ ತರಬೇತಿಯನ್ನು ನೀಡಿದರು. ವಿದ್ಯಾರ್ಥಿನಿ ಸ್ವಪ್ನ ಪ್ರಾರ್ಥಿಸಿದರು. ಸಹಶಿಕ್ಷಕ ಚಿಕ್ರಪ್ಪನವರ ಸಿದ್ಧನಗೌಡ ಸ್ವಾಗತಿಸಿ, ವಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

error: Content is protected !!