Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆಯ ಮುನ್ಸೂಚನೆ..!

---Advertisement---

ಬೆಂಗಳೂರು: ಬೆಂಬಿಡದೆ ಸುರಿಯುತ್ತಿದ್ದ ಮಳೆರಾಯ ಕಳೆದ ಎರಡು ದಿನದಿಂದ ಬಿಡುವು ಕೊಟ್ಟಿದ್ದಾನೆ. ಆದರೆ ನಾಳೆ ಮತ್ತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ತೀರ ಭಾಗದಲ್ಲಿ ಜೋರು ಮಳೆಯಾಗುವ ಸಾಧ್ಯತೆಯೇ ಹೆಚ್ಚಿದೆ ಎಂದು ತಿಳಿಸಿದೆ.

ಕಾಸರಗೋಡು, ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲೂ ಸ್ವಲ್ಪ ಮಳೆಯಾಗಲಿದೆ. ಕೊಡಗು ಹಾಸನ ಭಾಗದಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಭಾಗದಲ್ಲಿ ತುಂತುರು ಮಳೆಯಾಗಲಿದೆ. ಕರಾವಳಿಗೆ ಹೊಂದಿಕೊಂಡಂತ ಪ್ರದೇಶದಲ್ಲಿ ಜೋರು ಮಳೆಯಾಗಲಿದೆ. ಸದ್ಯ ರೈತರೆಲ್ಲ ಉತ್ತಮವಾದ ಮಳೆ ಕಂಡು ಹರ್ಷಗೊಂಡಿದ್ದಾರೆ. ಜಮೀನು ಉಳಿಮೆಯನ್ನು ಮಾಡಿ, ಬೀಜ ಬಿತ್ತನೆಯತ್ತ ಗಮನ ಹರಿಸಿದ್ದಾರೆ. ಈಗ ಮಳೆ ಕೊಂಚ ವಿಶ್ರಾಂತಿ‌ ನೀಡಿರುವುದು ವ್ಯವಸಾಯಕ್ಕೂ ಅನುಕೂಲಕರವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment