Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ – ಜೆಡಿಎಸ್ ತೆಕ್ಕೆಗೆ ಮಂಡ್ಯ ನಗರಸಭೆ : ವಾಮಮಾರ್ಗದಲ್ಲಿ ಅಧಿಕಾರ ಹಿಡಿದರು ಎಂದು ಸಿಡಿದೆದ್ದ ಕಾಂಗ್ರೆಸ್ ನಾಯಕ..!

---Advertisement---

ಮಂಡ್ಯ: ಇಂದು ಮಂಡ್ಯ ನಗರಸಭೆ ಚುನಾವಣೆ ನಡೆದಿದೆ. ಫೈನಲಿ ಬಿಜೆಪಿ ಹಾಗೂ ಜೆಡಿಎಸ್ ಅಬವ್ಯರ್ಥಿಯೇ ಗೆಲುವು ಸಾಧಿಸಿದ್ದಾರೆ. ಆದರೆ ಇಂದು ನಗರಸಭೆ ಆವರಣದಲ್ಲಿ ದೊಡ್ಡ ಹೈಡ್ರಾಮವೇ ನಿರ್ಮಾಣವಾಗಿತ್ತು. ಕುಮಾರಸ್ವಾಮಿ ನಗರಸಭೆ ಬಳಿ ಬರುತ್ತಿದ್ದಂತೆ ಸಾಕಷ್ಟು ಗದ್ದಲ ಶುರುವಾಗಿತ್ತು. ಮಾತಿನ ಚಕಮಕಿಯೂ ನಡರಯಿತು. ಕುಮಾರಸ್ವಾಮಿ ಅವರ ವಾಹನವನ್ನು ಮಾತ್ರ ಒಳಗೆ ಬಿಟ್ಟು, ಸದಸ್ಯರ ವಾಹನವನ್ನು ಪೊಲೀಸರು ತಡೆಹಿಡಿದಿದ್ದರು‌. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ತೀವ್ರ ಕುತೂಹಲ ಮೂಡಿಸಿದ್ದ ನಗರಸಭೆ ಅಧ್ಯಕ್ಷ – ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದೆ. ಎರಡನೇ ಅವಧಿಗೆ ಮಂಡ್ಯ ನಗರಸಭೆ ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆಯಾದರು. ಮಂಡ್ಯ ನಗರಸಭೆ ಬಿಜೆಪಿ-ಜೆಡಿಎಸ್ ಪಾಲಾಗುತ್ತಿದ್ದಂತೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಆದರೆ ಕಾಂಗ್ರೆಸ್ ಸದಸ್ಯರು ಮಾತ್ರ ಕೆರಳಿ ಕೆಂಡವಾಗಿದ್ದಾರೆ. ವಾಮಮಾರ್ಗದಲ್ಲಿ ಅಧಿಕಾರ ಹಿಡಿದಿದೆ ಎಂದು ಕಾಂಗ್ರೆಸ್ ಶಾಸಕ ರವಿ ಗಾಣಿಗ ಆರೋಪಿಸಿದರು. ಇದಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಶಾಸಕ ರವಿ ಗಾಣಿಗ ವಾಮಮಾರ್ಗದಲ್ಲಿ ಅಧಿಕಾರ ಹಿಡಿದಿದ್ದಾರೆ ಎಂದು ಆರೋಪಿಸಿದ್ದಾರೆ‌. ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು..? ಮತದಾನದ ವೇಳೆಯೂ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮಿಷವೊಡ್ಡಿದ್ದಾರೆ. ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ರಾಜಕೀಯ ಬೆಳವಣಿಗೆ ಗಮನಿಸಿ, ನಾನು ಬರಬೇಕಾಯಿತು. ಕ್ಯಾಬಿನೆಟ್ ಸಭೆ ಬಿಟ್ಟು ಪ್ರಧಾನಮಂತ್ರಿ ಅನುಮತಿ ಪಡೆದು, ಮತದಾನದಲ್ಲಿ ಭಾಗವಹಿಸಿದ್ದೇನೆ ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment