ಚಿತ್ರದುರ್ಗ. ಆಗಸ್ಟ್.29: ಹಿರಿಯೂರು ನಗರದ ಹರಿಶ್ಚಂದ್ರ ಘಾಟ್ ಬಡಾವಣೆ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಹಿರಿಯೂರು ತಾಲ್ಲೂಕಿನ ರವಿ ಎಂಬ ಯುವಕನ ವಿರುದ್ದ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.

ಮನೆ ಭೇಟಿ ಸಂದರ್ಭದಲ್ಲಿ ಬಾಲ್ಯ ವಿವಾಹವಾಗಿರುವ ಪ್ರಕರಣ ಗಮನಕ್ಕೆ ಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ, ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆಯಡಿ ಆಗಸ್ಟ್ 26 ರಂದು ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ರವಿ ವಿರುದ್ಧ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








