ಸೆಪ್ಟೆಂಬರ್ 01ರಂದು ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

1 Min Read

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 29 : ನಗರದ ತಾಲೂಕು ಪಂಚಾಯತ್ ಹಿಂಭಾಗದಲ್ಲಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಚಿತ್ರದುರ್ಗ ತಾಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸೆಪ್ಟೆಂಬರ್ 1ರಂದು ಬೆಳಗ್ಗೆ 11 ಕ್ಕೆ 2023-24ನೇ ಸಾಲಿನ ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.

ಹೊಸದುರ್ಗ ಕಾಗಿನೆಲೆ ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮಿಜಿಯವರ ಸಾನಿಧ್ಯದಲ್ಲಿ ಕರ್ನಾಟಕ ರಾಜ್ಯ ಆಹಾರ ನಿಗಮದ ಅಧ್ಯಕ್ಷ, ಶಾಸಕ ಬಿ.ಜಿ.ಗೋವಿಂದಪ್ಪ ಉದ್ಘಾಟಿಸುವರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪ್ರತಿಭಾ ಪುರಸ್ಕಾರ ವಿತರಿಸುವರು. ತಾಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಕೆ.ಮಂಜುನಾಥ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾದ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಮ್, ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷೆ ರಜನಿ ಲೇಪಾಕ್ಷ, ಜಿಲ್ಲಾ ಅಬಕಾರಿ ಅಧಿಕಾರಿ ಮಾದೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ತೋಟಗಾರಿಕೆ ಉಪನಿರ್ದೇಶಕ ಶರಣಬಸಪ್ಪ ಬೋಗಿ, ಕೃಷಿ ಉಪ ನಿರ್ದೇಶಕ ಕೆ.ಎಸ್.ಶಿವಕುಮಾರ್, ಮತ್ತಿತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *