Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸರ್ಕಾರಿ ಆಸ್ತಿ ರಕ್ಷಣೆ : ಜೂನ್ ತಿಂಗಳಲ್ಲಿ 224.4 ಎಕರೆ ಒತ್ತುವರಿ ಜಮೀನು ಮರಳಿ ಸರ್ಕಾರದ ಸುಪರ್ದಿಗೆ : ನ್ಯಾಯಮೂರ್ತಿ ಬಿ.ಎ. ಪಾಟೀಲ್

---Advertisement---

ಚಿತ್ರದುರ್ಗ. ಆಗಸ್ಟ್.30 :  ಕಳೆದ ಜೂನ್ ತಿಂಗಳೊಂದರಲ್ಲಿಯೇ ವಿಶೇಷ ನ್ಯಾಯಾಲಯದ ಮುಂದೆ ಇದ್ದ ಹಲವು ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ, ರಾಜ್ಯಾದ್ಯಂತ ಭೂ ಕಬಳಿಕೆಯಾಗಿದ್ದ 224.4 ಎಕರೆ ಒತ್ತುವರಿ ಜಮೀನನ್ನು ಮರಳಿ ಸರ್ಕಾರದ ಸುಪರ್ದಿಗೆ ವಹಿಸಿ ಆದೇಶ ನೀಡಲಾಗಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಹೇಳಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಕುರಿತು ಆಯೋಜಿಸಲಾದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧಿಕಾರಿಗಳ ಪ್ರಯತ್ನದ ಫಲವಾಗಿ ಕೋಟ್ಯಾಂತರ ರೂಪಾಯಿ ಮೌಲ್ಯದ 224.4 ಎಕರೆ ಜಮೀನು ಸರ್ಕಾರಕ್ಕೆ ಮರಳಿ ದೊರಕಿದೆ. ಸದ್ಯ ಸ್ಮಶಾನ ಹಾಗೂ ಸಾರ್ವಜನಿಕ ಉಪಯೋಗಕ್ಕೆ ಜಾಗ ಬೇಕು ಎಂದರೆ, ಸರ್ಕಾರ ಹಣ ನೀಡಿ ಭೂಮಿ ಕೊಂಡುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.  ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಬಲಿಷ್ಠ  ಹಾಗೂ ಪರಿಣಾಮಕಾರಿಯಾಗಿದೆ.

ಅಧಿಕಾರಿಗಳು ಕಾಯ್ದೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡು, ಸರ್ಕಾರಿ ಭೂಮಿಯ ರಕ್ಷಣೆಗೆ ಕಾರ್ಯ ಪ್ರವೃತ್ತರಾಗಬೇಕು.  ಅಧಿಕಾರಿಗಳು ಭೂ ಕಬಳಿಕೆ ಅಥವಾ ಒತ್ತುವರಿ ಗಮನಕ್ಕೆ ಬಂದರೆ, ವಿಶೇಷ ನ್ಯಾಯಾಲಯಕ್ಕೆ ಫಾರಂ 1 ರಲ್ಲಿ ಅರ್ಜಿ ಸಲ್ಲಿಸಿದರೆ ಸಾಕು, ಕಾನೂನಿನ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಒತ್ತಡ ಹಾಗೂ ಪ್ರಭಾವಗಳಿಗೆ ಮಣಿಯುವ ಅವಶ್ಯಕತೆ ಇಲ್ಲ. ಭೂ ಕಬಳಿಕೆಯ ಬಗ್ಗೆ ಮಾಹಿತಿ ಬಂದರೂ ಸಹ, ವಿಶೇಷ ನ್ಯಾಯಾಲಯ ಸ್ವಇಚ್ಛೆಯಿಂದ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುವುದು. ಒಂದು ವೇಳೆ ಭೂ ಒತ್ತುವರಿ ಕಂಡು ಬಂದರೂ ಸಹ ಅಧಿಕಾರಿಗಳು ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರಿದರೆ, ಭೂ ಕಬಳಿಕೆ ನಿμÉೀಧ ಅಧಿನಿಯಮದಡಿ, ಭೂ ಒತ್ತುವರಿಗೆ ಪೆÇ್ರೀತ್ಸಾಹ ನೀಡಿದ್ದಾರೆ ಎಂದು ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಎಚ್ಚರಿಸಿದರು.

ವಿಶೇಷ ನ್ಯಾಯಾಲಯದಲ್ಲಿ ಮಾಧ್ಯಮ ವರದಿಗಳನ್ನು ಆಧರಿಸಿ ಸಾಕಷ್ಟು ಭೂ ಕಬಳಿಕೆ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಹೀಗೆ ದಾಖಲಾದ ಹಲವು ಪ್ರಕರಣಗಳಲ್ಲಿ ಭೂ ಒತ್ತುವರಿಯನ್ನು ಸಹ ತೆರವುಗೊಳಿಸಲಾಗಿದೆ. ಮಲಪ್ರಭಾ ನದಿ ದಂಡೆ ಒತ್ತುವರಿ ಕುರಿತು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು. ಇದನ್ನು ಆಧರಿಸಿ ನ್ಯಾಯಾಲಯ ಸ್ವ ಇಚ್ಛೆಯಿಂದ ಪ್ರಕರಣ ಕೈಗೆತ್ತಿಕೊಂಡಿದೆ, ಈ ಬಗ್ಗೆ ಒಟ್ಟು 1800 ಹೆಚ್ಚು ಪ್ರಕರಣಗಳು ದಾಖಲಾಗಿವೆ. ಚಿಕ್ಕಮಗಳೂರು ಜಿಲ್ಲೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಒತ್ತುವರಿ ಸಂಬಂಧ ಮಾಧ್ಯಮ ವರದಿ ಆಧಿರಿಸಿ 17 ಪ್ರಕರಣಗಳನ್ನು ದಾಖಲಿಸಲಾಗಿದೆ. ನ್ಯಾಯಾಂಗ, ಕಂದಾಯ, ಭೂ ಸರ್ವೇ, ಪೆÇಲೀಸ್ ಹಾಗೂ ಅರಣ್ಯ ಇಲಾಖೆಗಳು ಒಟ್ಟಾಗಿ ಬಿಗಿ ಮುಷ್ಠಿಯಿಂದ ಸರ್ಕಾರಿ ಭೂಮಿಯನ್ನು ರಕ್ಷಿಸಿದರೆ, ಎಂತಹುದೇ ವ್ಯಕ್ತಿ ಅಥವಾ ಸಮೂಹಗಳಿಂದಲೂ ಭೂ ಕಬಳಿಕೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಕೆರೆಗಳ ಸರಹದ್ದುಗಳನ್ನು ಗೊತ್ತುಪಡಿಸಿ ಏರಿಗಳನ್ನು ನಿರ್ಮಿಸುವ ಮೂಲಕ, ಕೆರೆಗಳ ಒತ್ತುವರಿ ತೆರವಿಗೆ ಅಧಿಕಾರಿಗಳು ಪ್ರಯತ್ನಿಸಬೇಕು.  ಭೂ ಪರಿವರ್ತನೆ ನೀಡುವ ಪ್ರಾಧಿಕಾರಗಳು ಕೆರೆ ಹಾಗೂ ಸರ್ಕಾರಿ ಭೂಮಿ ಒತ್ತುವರಿ ಕುರಿತು ಪರಿಶೀಲನೆ ನಡೆಸಿ, ನಂತರ ಅನುಮತಿ ನೀಡುವಂತೆ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಸೂಚಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ್ ವಾಸುದೇವ್ ಮಾತನಾಡಿ, ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ, ಕೆರೆ, ಅರಣ್ಯ ಹಾಗೂ ಕಂದಾಯ ಭೂಮಿ ಒತ್ತುವರಿ ಮಾಡಿ ದುರ್ಲಾಭ ಪಡೆಯುತ್ತಿರುವ ಪಟ್ಟಭದ್ರ ವ್ಯಕ್ತಿಗಳನ್ನು ಕಾನೂನಿನ ಚೌಕಟ್ಟಿಗೆ ತರುವ ಕೆಲಸ ಮಾಡಬೇಕು. ಅತಿಕ್ರಮಣ ತೆರವುಗೊಳಿಸಿ ಸರ್ಕಾರಕ್ಕೆ ಆಸ್ತಿ ಮರಳಿಸಬೇಕು. ಮಾಧ್ಯಮಗಳು ಸಹ ಸರ್ಕಾರಿ ಭೂ ಕಬಳಿಕೆ ಕುರಿತು ವಿಸ್ತøತ ವರದಿ ಪ್ರಕಟಿಸುವ ಮೂಲಕ ನ್ಯಾಯಾಲಯಗಳ ಗಮನ ಸೆಳೆಯಬೇಕು. ಇದನ್ನು ಆಧರಿಸಿ ನ್ಯಾಯಾಲಯಗಳು ಪ್ರಕರಣ ದಾಖಲಿಸಿ, ತನಿಖೆಗೆ ಆದೇಶಿಸಿ ಸರ್ಕಾರಿ ಭೂಮಿ ರಕ್ಷಣೆಯನ್ನು ಮಾಡಲು ಸಹಕಾರಿಯಾಗಲಿದೆ ಎಂದರು.
ಚಿತ್ರದುರ್ಗ ಜಿಲ್ಲೆ ಬರ ಪೀಡಿತ ಪ್ರದೇಶವಾಗಿದ್ದು, ಕೆರೆಗಳ ಒತ್ತುವರಿ ಮೋಜಿಣಿ ಮಾಡುವುದು ಅಗತ್ಯವಿದೆ. ಕೆರೆ ಒತ್ತುವರಿ ನಿರ್ವಹಣೆ ಸಮಿತಿ ಅಧ್ಯಕ್ಷನಾಗಿ ಸದ್ಯದಲ್ಲೇ ಕೆರೆಗಳ ಮೋಜಿಣಿ ಕ್ರಮ ಕೈಗೊಳ್ಳುವುದಾಗಿ  ನ್ಯಾಯಾಧೀಶ ರೋಣ್ ವಾಸುದೇವ್ ಹೇಳಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...