Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ..!

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಜನ ಕಂಗಾಲಾಗಿದ್ದಾರೆ. ಇವತ್ತು ಕೊಂಚ ವರುಣಾರಾಯ ಬ್ರೇಕ್ ಕೊಟ್ಟಿದ್ದ. ಸಾಕಪ್ಪ ಸಾಕು ಅಂತ ನಿಟ್ಟುಸಿರು ಬಿಟ್ಟವರಿಗೆ ಸಂಜೆ ವೇಳೆಗೆ ಮತ್ತೆ ಮಳೆರಾಯ ತನ್ನ ಚಳಕ ತೋರಿಸಿದ್ದಾ‌ನೆ. ಜೋರು ಮಳೆಯಿಂದಾಗಿ ಮತ್ತೆ ಜನ ಹೈರಾಣಾಗಿದ್ದಾರೆ.

ನಗರ ಪ್ರದೇಶದ ಜನರಿಗೆ ಒಂದು ರೀತಿಯ ಸಮಸ್ಯೆಯಾದ್ರೆ ಗ್ರಾಮೀಣ ಭಾಗದ ರೈತರ ಗೋಳು ಕೇಳುವಂತಿಲ್ಲ. ಜಾನುವಾರುಗಳು ಮೇವಿಲ್ಲದೆ ಪರದಾಡಯವಂತಾಗಿದೆ. ಒಂದೇ ಸಮನೆ ಸುರಿಯುವ ಮಳೆಯಿಂದಾಗಿ ಹಸಿ ಮೇವು ತರಲು ಆಗುತ್ತಿಲ್ಲ, ಜಾನುವಾರುಗಳಿಗೆ ನೀಡಲು ಆಗುತ್ತಿಲ್ಲ ಅಂತ ಪರಿಸ್ಥಿತಿ ಎದುರಾಗಿದೆ.

ಮತ್ತೊಂದು ಕಡೆ ಮಳೆಯಿಂದಾಗಿ ರೈತರು ಬೆಳೆದ ಬೆಳೆ ಸಂಪೂರ್ಣ ನೀರು ಪಾಲಾಗಿದೆ. ಬೆಳೆ ಪರಿಹಾರಕ್ಕಾಗಿ ರೈತರು ಸರ್ಕಾರದತ್ತ ನೋಡುತ್ತಿದ್ದಾರೆ. ಜೊತೆಗೆ ಮಳೆಯಿಂದಾಗಿ ಮನೆಗಳು ಕುಸಿದು ಬದುಕು ಇನ್ನು ದುಸ್ತರವಾಗಿದೆ. ಮನೆ ಕಳೆದುಕೊಂಡವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.

ಜಿಲ್ಲೆಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ನೀಡಿದ ಮಾಹಿತಿ ಆಧಾರದ ಮೇಲೆ ಸಂಪೂರ್ಣ ಹಾಳಾಗಿರುವ ಮನೆಗೆ 5 ಲಕ್ಷ ಪರಿಹಾರ ಹಾಗೂ ಭಾಗಶಃ ಹಾಳಾಗಿರುವ ಮನೆಗಳಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಜೊತೆಗೆ ನಾಳೆಯಿಂದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂರನೇ ಬಾರಿಗೆ ಸೋತ ನಿಖಿಲ್ ಕುಮಾರಸ್ವಾಮಿ…!

ಸುದ್ದಿಒನ್ | ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ ದೇಶಾದ್ಯಂತ ವಿವಿಧ ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಕರ್ನಾಟಕದಲ್ಲಿ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

error: Content is protected !!