ಚಿತ್ರದುರ್ಗ. ಸೆ.03: 2024-25ನೇ ಸಾಲಿನಲ್ಲಿ 2024ರ ಅಕ್ಟೋಬರ್ 17ರಂದು ನಡೆಯಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯAದು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಮಟ್ಟದಲ್ಲಿ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 18 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಹ ವ್ಯಕ್ತಿಗಳು ತಮ್ಮ ಪೂರ್ಣ ದಾಖಲಾತಿಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳವರ ಕಛೇರಿ, ಜೆ.ಸಿ.ಆರ್. ಬಡಾವಣೆ, 4ನೇ ಕ್ರಾಸ್ (ಪೂರ್ವ), ಗಣೇಶ ದೇವಸ್ಥಾನದ ಹತ್ತಿರ, ಚಿತ್ರದುರ್ಗ ಹಾಗೂ ಆಯಾ ತಾಲ್ಲೂಕಿನ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿಗಳನ್ನು ಪಡೆದು ಮಾಹಿತಿಯೊಂದಿಗೆ ಭರ್ತಿ ಮಾಡಿ ಇದೇ ಸೆಪ್ಟೆಂಬರ್ 18ರಂದು ಸಂಜೆ 5.30ರೊಳಗಾಗಿ ಆಯಾ ತಾಲ್ಲೂಕಿನ ಕಚೇರಿಯಲ್ಲಿ ಸಲ್ಲಿಸಬೇಕು.
ಷರತ್ತುಗಳು: ಅರ್ಜಿದಾರರ ವಯಸ್ಸು ಕನಿಷ್ಟ 35 ವರ್ಷದವರಾಗಿರಬೇಕು. ಪ್ರಶಸ್ತಿಗೆ ಅರ್ಜಿ ಸಲ್ಲಿಸಿರುವ ವ್ಯಕ್ತಿಯು ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರತಕ್ಕದ್ದು. ಅರ್ಜಿದಾರರು ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿರುವ ಬಗ್ಗೆ ವೈಯಕ್ತಿಕ ವಿವರಗಳೊಂದಿಗೆ ದಾಖಲೆಗಳ ಸಹಿತ ಅರ್ಜಿ ಸಲ್ಲಿಸುವುದು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.