ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಕ್ರಮ, ಧೂಮಪಾನ, ಮದ್ಯಪಾನ ನಿಷೇಧ : ಸಿದ್ದರಾಮಯ್ಯ

1 Min Read

ಮೈಸೂರು: ಚಾಮುಂಡಿ ಬೆಟ್ಟದ ಮೇಲೆ ಧೂಮಪಾನ, ಮದ್ಯಪಾನ, ಗುಟ್ಕಾ ಪಾನ್ ಗಳನ್ನು ಸಂಪೂರ್ಣ ನಿಷೇದಿಸಲಾಗಿದೆ. ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಪ್ರಸಾದ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಈ ಯೋಜನೆಗೆ ಹೆಚ್ಚುವರಿಯಾಗಿ ಬೇಕಾಗುವ 11 ಕೋಟಿ ರೂ.ಗಳನ್ನು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಭರಿಸಲಾಗುವುದು. ದೇವಾಲಯದ ಒಳಗೆ ಛಾಯಾಗ್ರಹಣವನ್ನು ನಿಷೇದಿಸಲಾಗಿದ್ದು, ಮೊಬೈಲ್ ಗಳನ್ನು ಬಂದ್ ಮಾಡಿಕೊಳ್ಳುವ ಆದೇಶ ನೀಡಲಾಗುವುದು ಎಂದರು.

 

ಪ್ರಸನ್ನ ಕೃಷ್ಣ ಸ್ವಾಮಿ ದೇವಾಲಯ,ಗಾಯತ್ರಿಯಮ್ಮನವರ ದೇವಾಲಯ,ಭುವನೇಶ್ವರಿ ಅಮ್ಮನವರ ದೇವಾಲಯ , ಕೋಟೆ ಆಂಜನೀಯದೇವಾಲಯ, ವರಾಹ ಸ್ವಾಮಿ ದೇವಾಲಯಗಳ ಐದು ದೇವಾಲಯಗಳ ಸಮೂಹವನ್ನು ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳಲಾಗುವುದು. ಇಲ್ಲಿ ಕರ್ತವ್ಯನಿರ್ವಹಿಸುವ ಖಾಯಂ ಸಿಬ್ಬಂದಿಗಳಿಗೆ ವೈದ್ಯಕೀಯ ಸೌಲಭ್ಯ ಹಾಗೂಅವರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದರು.

 

ಚಾಮುಂಡಿಬೆಟ್ಟ ಕ್ಷೇತ್ರವನ್ನು ಹೆಚ್ಚು ಆಕರ್ಷಣೀಯವಾಗಿ ಮಾಡುವ ಜೊತೆಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಇಲ್ಲಿನ ದಾಸೋಹ ಭವನದ ವ್ಯವಸ್ಥೆಗಳನ್ನು ಸುಧಾರಿಸಿ, ಭಕ್ತಾದಿಗಳಿಗೆ ಶುಚಿ ರುಚಿಯಿರುವಂತಹ ಊಟವ್ಯವಸ್ಥೆಗಳನ್ನು ಮಾಡಲು ವ್ಯವಸ್ಥೆಗೊಳಿಸಲು ತೀರ್ಮಾನಿಸಲಾಗಿದೆ. ಚಾಮುಂಡಿಕ್ಷೇತ್ರದ ಪ್ರಾದಿಕಾರದಲ್ಲಿ 169 ಕೋಟಿ ಖಾಯಂ ಠೇವಣಿ ಇದ್ದು, ಇದರ ಆದಾಯದಲ್ಲಿ ಈ ಎಲ್ಲ ವೆಚ್ಚಗಳನ್ನು ಭರಿಸಬಹುದಾಗಿದೆ ಎಂದರು.

 

ದೇವಸ್ಥಾನದ ಆಸ್ತಿಯಾಗಿರುವ ಭೂಮಿ ಒತ್ತುವರಿ ಆಗಿರುವ ಸಾಧ್ಯತೆಯಿರುವುದರಿಂದ, ಅವುಗಳ ಸರ್ವೇ ಮಾಡಲು ತಿಳಿಸಲಾಗಿದ್ದು, ಸರ್ವೆ ನಡೆಸಿದ ವರದಿಯನ್ನು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಮಂಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

 

ಆರ್ ಎಸ್ ಎಸ್ ನವರು ಜಾತಿ ಜನಗಣತಿ ವರದಿ ದುರ್ಬಳಕೆಯಾಗಬಾರದು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಜನಗಣತಿ ವರದಿಯನ್ನು ಆರ್ಥಿಕ ಹಾಗೂ ಸಾಮಾಜಿಕ ಕಾರ್ಯಗಳಿಗಾಗಿ ಮಾತ್ರ ಬಳಕೆಯಾಗಬೇಕೆಂಬ ಷರತ್ತಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *