Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಸಮೃದ್ಧಿ ಜೀವನ ಸೊಸೈಟಿಯಿಂದ ವಂಚನೆಗೊಳಗಾದವರು ದಾಖಲೆಗಳೊಂದಿಗೆ ಇವರನ್ನು ಸಂಪರ್ಕಿಸಿ…!

---Advertisement---

ಸುದ್ದಿಒನ್, ಚಿತ್ರದುರ್ಗ. ಸೆ.04: ಚಿತ್ರದುರ್ಗ ನಗರದಲ್ಲಿ 2009 ರಿಂದ 2015 ರವರೆಗಿನ ಮಧ್ಯದ ಅವಧಿಯಲ್ಲಿ ಶ್ರೀನಾಥ್ ಬಿಲ್ಡಿಂಗ್‌ನಲ್ಲಿ ಪುಣೆ ಮೂಲದ “ಸಮೃದ್ಧ ಜೀವನ ಫುಡ್ಸ್ ಹಾಗೂ ಸಮೃದ್ಧ ಜೀವನ ಮಲ್ಟಿಸ್ಟೇಟ್ ಮಲ್ಟಿ ಪರ್ಪಸ್ ಕೋ ಆಪರೇಟಿವ್ ಸೊಸೈಟಿ ಸಂಸ್ಥಾಪರಾದ ಮಹೇಶ್ ಕಿಸಾನ್ ಮೊತ್ತೆದಾರ್ ಹಾಗೂ ಇನ್ನಿತರರು ಸೇರಿಕೊಂಡು ಸಾರ್ವಜನಿಕರಿಂದ ಐದುವರೆ ವರ್ಷದಲ್ಲಿ ಹಣವನ್ನು ದ್ವಿಗುಣ ಮಾಡಿಕೊಡುವುದಾಗಿ ಹೇಳಿ ನಂಬಿಸಿ ಮೋಸದಿಂದ ಹಣವನ್ನು ಠೇವಣಿ ಮಾಡಿಸಿಕೊಂಡು ನಂತರ ದ್ವಿಗುಣ ಹಣ ನೀಡುವ ಸಮಯ ಬಂದಾಗ ಸೊಸೈಟಿಯನ್ನು ಮುಚ್ಚಿಕೊಂಡು ಹೋಗಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದಾಗಿ ನೀಡಿದ ದೂರಿನ ಮೇರೆಗೆ ಚಿತ್ರದುರ್ಗ ನಗರದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಪ್ರಸ್ತುತ ಬೆಂಗಳೂರಿನ ಸಿ.ಐ.ಡಿ ತನಿಖೆಯಲ್ಲಿದೆ.

 

ಸಾರ್ವಜನಿಕರು “ಸಮೃದ್ಧ ಜೀವನ ಫುಡ್ಸ್ ಹಾಗೂ ಸಮೃದ್ಧ ಜೀವನ ಮಲ್ಟಿಸ್ಟೇಟ್ ಮಲ್ಟಿ ಪರ್ಪಸ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಹಣ ಠೇವಣಿ, ಹೂಡಿಕೆ ಮಾಡಿದ್ದು, ಅವಧಿ ಪೂರ್ಣ ನಂತರದಲ್ಲಿ ಈ ಕಂಪನಿ ಅಥವಾ ಸೊಸೈಟಿಯವರು ಹಣ ಮರುಪಾವತಿ ಮಾಡದೇ ಇದ್ದ ಪಕ್ಷದಲ್ಲಿ ಅಂತಹ ವ್ಯಕ್ತಿಗಳು ತಮಗೆ ಕಂಪನಿ, ಸೊಸೈಟಿಯವರು ಹಣ ಪಡೆದು ನೀಡಿದ್ದ ಬಾಂಡ್, ರಸೀದಿ ಇತ್ಯಾದಿ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ವಾರದೊಳಗೆ ಬೆಂಗಳೂರು ಅರಮನೆ ರಸ್ತೆ, ಸಿ.ಐ.ಡಿ ಮುಖ್ಯ ಕಚೇರಿಯ ಆರ್ಥಿಕ ಅಫರಾಧಗಳ ವಿಭಾಗದ ಪೊಲೀಸ್ ಉಪಾಧೀಕ್ಷಕರನ್ನು ಅಥವಾ ದೂರವಾಣಿ ಸಂಖ್ಯೆ 080-22094469 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment