ಚಿತ್ರದುರ್ಗ. ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ) ಸೂರ್ಯಕಾಂತಿಯನ್ನು ಖರೀದಿಸಲು, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಹಿರಿಯೂರು ತಾಲ್ಲೂಕಿನ ಯರಬಳ್ಳಿ/ಐಮಂಗಲ, ಧರ್ಮಪುರ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘ ಹಾಗೂ ಹಿರಿಯೂರು ಎ.ಪಿ.ಎಂ.ಸಿ, ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ, ದೇವರೆಡ್ಡಿಹಳ್ಳಿ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘ ಮತ್ತು ಚಳ್ಳಕೆರೆ ಎ.ಪಿ.ಎಂ.ಸಿ ಹಾಗೂ ಚಿತ್ರದುರ್ಗ ತಾಲ್ಲೂಕಿನ ತುರುವನೂರಿನ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘದಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮತಿ ಕಾರ್ಯದರ್ಶಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














