Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿ ಅನಾಮದೇಯ ಶವ ಪತ್ತೆ : ಗುರುತಿಗೆ ಮನವಿ

---Advertisement---

 

 

ಚಿತ್ರದುರ್ಗ. ಸೆ. 06: ಚಿತ್ರದುರ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ಇರುವ ಸಿಟಿ ಹೋಟೆಲ್ ಪಕ್ಕದಲ್ಲಿರುವ ಮಳಿಗೆ ಮುಂಭಾಗದ ಮೆಟ್ಟಿಲಿನ ಮೇಲೆ ಸುಮಾರು 55-60 ವರ್ಷದ ಅನಾಮಧೇಯ ವ್ಯಕ್ತಿ ಶವ ಪತ್ತೆಯಾದ ಕುರಿತು ಸೆ.5ರಂದು ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನಾಮಧೇಯ ವ್ಯಕ್ತಿಯು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ತಲೆಯಲ್ಲಿ ಕಪ್ಪು ಮತ್ತು ಬಿಳಿ ಕೂದಲು, ಗಡ್ಡ ಮೀಸೆ ಇರುತ್ತದೆ. ಎರಡೂ ಕಾಲುಗಳಿಗೆ ಬ್ಯಾಂಡೇಜ್ ಸುತ್ತಿರುವುದು ಕಂಡು ಬಂದಿರುತ್ತದೆ. ಮೃತನ ಮೈಮೇಲೆ ಮಾಸಲು ಬಣ್ಣದ ಟೀ ಶರ್ಟ್, ನೀಲಿ ಬಣ್ಣದ ಬನಿಯನ್, ನಶಿ ಕಲರ್ ಚಡ್ಡಿ ಇರುತ್ತದೆ.

ಮೃತ ಅನಾಮಧೇಯ ವ್ಯಕ್ತಿಯ ಕುರಿತು ಮಾಹಿತಿ ತಿಳಿದುಬಂದಲ್ಲಿ ಕೋಟೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ದೂರವಾಣಿ ಸಂಖ್ಯೆ 08194-222933. 9480803145, ಪೊಲೀಸ್ ಉಪಾಧೀಕ್ಷಕರ ದೂರವಾಣಿ ಸಂಖ್ಯೆ 08194-222430, 9480803120, ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ 08194-222782 ಗೆ ಸಂಪರ್ಕಿಸುವಂತೆ ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ಪಿಎಸ್‌ಐ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment