Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ…!

---Advertisement---

ವರದಿ ಮತ್ತು ಫೋಟೋ ಕೃಪೆ,                                  ಸುರೇಶ್ ಬೆಳಗೆರೆ,  ಚಳ್ಳಕೆರೆ,   ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಸೆಪ್ಟೆಂಬರ್. 09 : ಗಂಡ ಹೆಂಡಿರ ಜಗಳ ಉಂಡು ಮಲಗುವ ತನಕ ಎಂದು ಹೇಳುತ್ತಾರೆ .ಆದರೆ ಗಂಡ ಹೆಂಡರಿಬ್ಬರೂ ಗಲಾಟೆ ಮಾಡಿಕೊಂಡು ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಗಂಡ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ತಾಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮರಾಠಿ ಸಮುದಾಯಕ್ಕೆ ಸೇರಿದ ಹರಿಶ್ಚಂದ್ರ (60) ಮತ್ತು ಯಶೋದಮ್ಮ ದಂಪತಿಗಳು ಪರಸ್ಪರ ಜಗಳ ಮಾಡಿಕೊಂಡು ಒಬ್ಬರಿಗೊಬ್ಬರು ಕೋಲಿನಿಂದ ಬಡೆದಾಡಿಕೊಂಡಿದ್ದಾರೆ. ಈ ವೇಳೆ ಹರಿಶ್ಚಂದ್ರನಿಗೆ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ. ಯಶೋದಮ್ಮನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಟಿ. ಬಿ. ರಾಜಣ್ಣ ಹಾಗೂ ತಳಕು ಪಿಎಸ್ ಐ ಲೋಕೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment