Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಮರಕ್ಕೆ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸಾವು..!

---Advertisement---

 

 

ವರದಿ ಮತ್ತು ಫೋಟೋ ಕೃಪೆ : ಸುರೇಶ್ ಬೆಳಗೆರೆ,    ಮೊ : 97398 75729

ಸುದ್ದಿಒನ್, ಚಿತ್ರದುರ್ಗ,ಸೆಪ್ಟೆಂಬರ್. 11 : ಮರಕ್ಕೆ ಕಾರು ಡಿಕ್ಕಿಯಾಗಿ, 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಇಂದು (ಬುಧವಾರ) ಸಂಜೆ ನಡೆದಿದೆ. ಸಂಬಂಧಿಕರೊಬ್ಬರ ಅಂತ್ಯ ಕ್ರಿಯೆ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಿತ್ರದುರ್ಗ – ಚಳ್ಳಕೆರೆ ಮಧ್ಯದ ಕಲ್ಲಹಳ್ಳಿಯ ಬಳಿ ಈ ಅಪಘಾತ ನಡೆದಿದ್ದು, ಮಗು ಸಾವನ್ನಪ್ಪಿದ್ದು ಇಬ್ಬರಿಗೆ ಗಾಯವಾಗಿದೆ.

2 ವರ್ಷದ ಕಿಶನ್ ಎಂಬ ಮಗು ಸಾವನ್ನಪ್ಪಿದೆ. ಗಾಯಗೊಂಡವರಿಗೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪಘಾತವಾದ ಕಾರು ಅನಿಲ್ ಎಂಬವರಿಗೆ ಸೇರಿದ್ದಾಗಿದೆ. ಅನಿಲ್, ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ರಾಮಜೋಗಿಹಳ್ಳಿಯವರು. ಸಂಬಂಧಿಯೊಬ್ಬರ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಮರಳುತ್ತಿದ್ದರು. ಆದರೆ ಈ ವೇಳೆ ಇಂಥ ಅಪಘಾತ ಸಂಭವಿಸಿ ಮಗು ಸಾವನ್ನಪ್ಪಿದೆ.

ಅನಿಲ್ ತಮ್ಮ ಕಾರಿನಲ್ಲಿ ಸಹೋದರಿ ಮಾನಸ, ಹಾಗೂ ಕಿಶನ್ ಜೊತೆಗೆ ಚಿತ್ರದುರ್ಗಕ್ಕೆ ಬಂದಿದ್ದರು. ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ಕಲ್ಲಹಳ್ಳಿ ಬಳಿ ಕಾರು ಮರಕ್ಕೆ‌ ಡಿಕ್ಕಿಯಾಗಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆ ಹಾಗೂ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆ ಪುಟ್ಟ ಕಂದಮ್ಮನ ಸಾವಿಗೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...