Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಪಿಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ

Facebook
Twitter
Telegram
WhatsApp

 

ಸುದ್ದಿಒನ್, ನವದೆಹಲಿ, ಸೆಪ್ಟೆಂಬರ್. 12 : ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ನಿಧನರಾಗಿದ್ದಾರೆ. ಅವರು ಉಸಿರಾಟ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಆಗಸ್ಟ್ 19 ರಂದು ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ವೈದ್ಯರು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಅಂತಿಮವಾಗಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು (ಸೆಪ್ಟೆಂಬರ್ 12, ಗುರುವಾರ) ಕೊನೆಯುಸಿರೆಳೆದರು.

ತೀವ್ರ ಜ್ವರದಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ ಕಳೆದ 25 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಡಾ.ಶ್ರೀನಾಥರೆಡ್ಡಿ ಮತ್ತು ಡಾ.ಗೌರಿ ನೇತೃತ್ವದ ವೈದ್ಯಕೀಯ ತಂಡ ಚಿಕಿತ್ಸೆ ನೀಡಿತ್ತು. ಆದರೆ ಸೋಂಕನ್ನು ಹೋಗಲಾಡಿಸಲು ಬಳಸಿದ ಔಷಧಗಳು ಕೆಲಸ ಮಾಡದ ಕಾರಣ ಜಪಾನ್ ನಿಂದಲೂ ವಿಶೇಷ ಔಷಧಗಳನ್ನು ತರಿಸಲಾಗಿತ್ತು. ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಇದು ಕಮ್ಯುನಿಸ್ಟ್ ವಲಯದಲ್ಲಿ ತೀವ್ರ ದುಃಖವನ್ನುಂಟು ಮಾಡಿತು.

ಸೀತಾರಾಮ್ ಯೆಚೂರಿ ಅವರು 1952 ಆಗಸ್ಟ್ 12 ರಂದು ಚೆನ್ನೈನಲ್ಲಿ ಜನಿಸಿದರು. ಅವರು ಹೈದರಾಬಾದ್‌ನಲ್ಲಿ ಬೆಳೆದರು. 10ನೇ ತರಗತಿವರೆಗೆ ಆಲ್ ಸೇಂಟ್ಸ್ ಹೈಸ್ಕೂಲಿನಲ್ಲಿ, 12ನೇ ತರಗತಿಯ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದರು.

1969ರ ತೆಲಂಗಾಣ ಚಳವಳಿಯ ಸಂದರ್ಭದಲ್ಲಿ ಅವರು ದೆಹಲಿ ತಲುಪಿದ್ದರು. ಯೆಚೂರಿ ಅವರು ದೆಹಲಿಯ ಪ್ರೆಸಿಡೆಂಟ್ಸ್ ಎಸ್ಟೇಟ್ ಶಾಲೆಯಲ್ಲಿ ಪ್ರವೇಶ ಪಡೆದರು. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಅಖಿಲ ಭಾರತ ರ್ಯಾಂಕ್ ಒಂದನ್ನು ಸಾಧಿಸಿದರು. ಅವರು ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಮೊದಲ ಶ್ರೇಣಿಯೊಂದಿಗೆ ಅರ್ಥಶಾಸ್ತ್ರದಲ್ಲಿ ತಮ್ಮ ಬಿಎ (ಆನರ್ಸ್) ಪೂರ್ಣಗೊಳಿಸಿದರು. ನಂತರ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ (ಜೆಎನ್‌ಯು) ಅರ್ಥಶಾಸ್ತ್ರದಲ್ಲಿ ಎಂಎ ಮಾಡಿದರು. ಪಿಎಚ್‌ಡಿಗಾಗಿ ಜೆಎನ್‌ಯುನಲ್ಲಿ ಪ್ರವೇಶ ಪಡೆದರು. ಆದಾಗ್ಯೂ, 1975 ರಲ್ಲಿ, ಅವರು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಲ್ಪಟ್ಟರು.

ಸಿಎಂ ಸಿದ್ದರಾಮಯ್ಯ ಸಂತಾಪ : ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಎಡ ಸಿದ್ದಾಂತದ ಪ್ರಖರ ಚಿಂತಕರಾಗಿದ್ದ ಯಚೂರಿ ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯೂ ಆಗಿದ್ದರು.

ಕೋಮುವಾದಿ ರಾಜಕೀಯದ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸುವಿಕೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಾ ಬಂದಿರುವ ಯಚೂರಿಯವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ರೂವಾರಿಗಳಲ್ಲೊಬ್ಬರಾಗಿದ್ದರು. ಆ ಸರ್ಕಾರದ ‘ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ ರಚನೆಯಲ್ಲಿಯೂ ಅವರದ್ದೇ ಪ್ರಧಾನ ಪಾತ್ರ ಇತ್ತು. ಕಳೆದ ವರ್ಷ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೆ ಆಗಮಿಸಿ, ಶುಭ ಹಾರೈಸಿದ್ದರು. ಈಗಿನ ‘ಇಂಡಿಯಾ’ ಒಕ್ಕೂಟ ಸ್ಥಾಪನೆಯಲ್ಲಿಯೂ ಅವರ ಕೊಡುಗೆ ಇದೆ.

ಸೀತಾರಾಮ್ ಯಚೂರಿ ಅವರ ನಿಧನದಿಂದ ಕೋಮುವಾದ ಮತ್ತು ಬಂಡವಾಳವಾದದ ವಿರುದ್ಧದ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ.

ಯಚೂರಿ ಅವರ ಕುಟುಂಬ ಮತ್ತು ಸಂಗಾತಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು x ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

 

https://x.com/siddaramaiah/status/1834191388310659192?t=XibgT8XE-Gz79kMt3zIoOw&s=19

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಣಂತಿಯರ ಸಾವು ಪ್ರಕರಣ : ಸರ್ಕಾರದ ನಿರ್ಲಕ್ಷ್ಯ ದಿಂದ ಬಡವರು ಸರ್ಕಾರಿ ಆಸ್ಪತ್ರೆಗಳಿಗೆ ಬರುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ : ಸಂಸದ ಗೋವಿಂದ ಎಂ.ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 03 : ಕೇಂದ್ರ ಸರ್ಕಾರದ ಪ್ರಬಲ ಇಚ್ಚಾಶಕ್ತಿಯ ನಡುವೆಯೂ, ಕೆಲವು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತೆಯಿಂದಾಗಿ, ಜನಪರ ಕಾಳಜಿ ಇಲ್ಲದೇ ಇರುವ ಕಾರಣದಿಂದಾಗಿ ಬಡಜನರು, ಕೂಲಿಕಾರ್ಮಿಕರು, ಸರ್ಕಾರಿ ಆಸ್ಪತ್ರೆಗಳಿಗೆ ಬರುವುದಕ್ಕೆ ಹಿಂದೇಟು

ಹೆಚ್‌ಐವಿ ಕುರಿತು ಯುವ ಜನತೆ ಜಾಗರೂಕರಾಗಿರಿ : ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ

ಚಿತ್ರದುರ್ಗ. ಡಿ.03: ದೇಶದಲ್ಲಿ ಹೆಚ್.ಐ.ವಿ. ಸೊಂಕಿಗೆ ತುತ್ತಾಗುತ್ತಿರುವವರ ಪೈಕಿ ಹೆಚ್ಚಿನವರು ಯುವಕರಾಗಿರುವುದು ಆತಂತಕಾರಿ ವಿಷಯವಾಗಿದೆ. ಯುವ ಜನತೆ ಹೆಚ್.ಐ.ವಿ ಕುರಿತು ಜಾಗರೂಕರಾಗಿರಬೇಕು ಎಂದು ಜಿಲ್ಲಾ ಶಸ್ತç ಚಿಕಿತ್ಸಕ ಎಸ್.ಪಿ. ರವೀಂದ್ರ ಕಿವಿ ಮಾತು ಹೇಳಿದರು.

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅವರಿಂದ ಜಿಲ್ಲಾಸ್ಪತ್ರೆಗೆ ಅಂಬ್ಯುಲೆನ್ಸ್ ಹಸ್ತಾಂತರ

ಚಿತ್ರದುರ್ಗ. ಡಿ.03: ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಮಂಗಳವಾರ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅವರು ಅಂಬ್ಯುಲೆನ್ ಸೇವೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಹೊಳಲ್ಕೆರೆ ಶಾಸಕರಾದ ಎಂ.ಚಂದ್ರಪ್ಪ ಅವರು ಶಾಸಕರ ನಿಧಿಯಿಂದ

error: Content is protected !!